ಚಾಮರಾಜನಗರ: ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಶ್ರೀನಿವಾಸ ರಾವ್ (96) ಅವರು ಬುಧವಾರ ಮೈಸೂರಿನಲ್ಲಿ ನಿಧನರಾದರು.
ನಗರದ ರಾಮಸಮು ದ್ರದವರಾದ ಅವರಿಗೆ ನಾಲ್ವರು ಪುತ್ರರಿದ್ದಾರೆ. ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಶ್ರೀನಿವಾಸ್ ರಾವ್ ಅವರ ನಿವಾಸಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ
ಹುಡೇದ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಜಿಲ್ಲಾಡಳಿತದ ಪರವಾಗಿ ಗೌರವ ಸಮರ್ಪಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರನ್ನು ಮೈಸೂರಿನ ಅವರ ಮನೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಆಗಸ್ಟ್ 9ರಂದು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪ ನಾಗ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಸನ್ಮಾನಿಸಿದ್ದರು.
ಮೈಸೂರಿನ ಹರಿಶ್ಚಂದ್ರಘಾಟ್‌ನಲ್ಲಿ ಗುರುವಾರ ಬೆಳಿಗ್ಗೆ 10 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದು ಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.