ಗುಂಡ್ಲುಪೇಟೆ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಾಲ್ಲೂಕಿನ ಬೊಮ್ಮಲಾಪುರ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ, ತಮ್ಮ ರಾಜೀನಾಮೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿ ರವಿ ಅವರಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ರವಿ ಅವರ ತಾಯಿ ರೇವಮ್ಮ ಹಾಗೂ ಇತರ ಸದಸ್ಯರಿಗೆ ಧೈರ್ಯ ತುಂಬಿದ ಅವರು, ₹5 ಲಕ್ಷ ರೂಪಾಯಿ ಪರಿಹಾರವನ್ನೂ ನೀಡಿದರು.
ಮನೆ ದುರಸ್ತಿಗೆ ಇನ್ನೂ ₹5 ಲಕ್ಷ ನೀಡುವ ಭರವಸೆಯನ್ನೂ ಕೊಟ್ಟರು.
ಇದನ್ನೂ ಓದಿ:ಗುಂಡ್ಲುಪೇಟೆ: ಯಡಿಯೂರಪ್ಪ ಅಭಿಮಾನಿ ಆತ್ಮಹತ್ಯೆ
ಮಗ ವಿಜಯೇಂದ್ರ ಶಾಸಕರಾದ ಸಿ.ಎಸ್. ನಿರಂಜನಕುಮಾರ್, ಎನ್.ಮಹೇಶ್ ಅವರು ಜೊತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.