ADVERTISEMENT

ಗುಂಡ್ಲುಪೇಟೆ: 13ರಂದು ಮೆಗಾ ಲೋಕ ಅದಾಲತ್

​ಪ್ರಜಾವಾಣಿ ವಾರ್ತೆ
Published 4 ಜುಲೈ 2024, 14:34 IST
Last Updated 4 ಜುಲೈ 2024, 14:34 IST

ಗುಂಡ್ಲುಪೇಟೆ: ಪಟ್ಟಣದ ಜೆ.ಎಂ.ಎಫ್.ಸಿ ನ್ಯಾಯಾಲಯದಲ್ಲಿ ರಾಷ್ಟ್ರೀಯ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದಂತೆ ಜುಲೈ 13ರಂದು ಮೆಗಾ ಲೋಕ ಅದಾಲತ್ ನಡೆಯಲಿದೆ.

ಹಿರಿಯ ನ್ಯಾಯಾಧೀಶರು ಹಾಗೂ ತಾಲ್ಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ತಳವಾರ್ ಮತ್ತು ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಕುಮಾರ ಜಿ.ಜೆ ನೇತೃತ್ವದಲ್ಲಿ ತಾಲ್ಲೂಕಿನ ನ್ಯಾಯಾಲಯಗಳಲ್ಲಿ ಸಭೆ ಏರ್ಪಡಿಸಿ ಸಂಧಾನಕಾರರನ್ನು ನೇಮಿಸಿ ಲೋಕ ಅದಾಲತ್‍ನ್ನು ನಡೆಸಲಾಗುತ್ತದೆ.

ಲೋಕ ಅದಾಲತ್‌ನಲ್ಲಿ ರಾಜಿಯಾಗಬಲ್ಲ ಅಪರಾಧ ಪ್ರಕರಣ, ಬ್ಯಾಂಕ್ ಸಾಲ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣ, ಕೈಗಾರಿಕಾ ಕಾರ್ಮಿಕರ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ ಚೆಕ್ ಅಮಾನ್ಯ, ಅಪಘಾತ ಪರಿಹಾರ, ಭೂಸ್ವಾಧೀನ, ವೇತನ ಭತ್ಯೆ, ಪಿಂಚಣಿಗೆ ಸಂಬಂಧಿಸಿದ ಪ್ರಕರಣ, ಸಾರ್ವಜನಿಕ ಉಪಯುಕ್ತ ಸೇವೆಗಳಿಗೆ ಸಂಬಂಧಿಸಿದ ಪ್ರಕರಣ, ರಾಜಿಗೆ ಯೋಗ್ಯವಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಕುಟುಂಬ ನ್ಯಾಯಾಲಯ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.