ADVERTISEMENT

ಎಲ್ಲರೂ ಮತ ಚಲಾಯಿಸಿ: ತಹಶೀಲ್ದಾರ್‌

ವಿದ್ಯುನ್ಮಾನ ಮತಯಂತ್ರ, ವಿವಿ ಪ್ಯಾಟ್ ಜಾಗೃತಿ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2023, 16:22 IST
Last Updated 8 ಡಿಸೆಂಬರ್ 2023, 16:22 IST
ಗುಂಡ್ಲುಪೇಟೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಗಳ ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗೆ ತಹಸೀಲ್ದಾರ್ ಟಿ.ರಮೇಶ್ ಬಾಬು ಚಾಲನೆ ನೀಡಿದರು.
ಗುಂಡ್ಲುಪೇಟೆ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಗಳ ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗೆ ತಹಸೀಲ್ದಾರ್ ಟಿ.ರಮೇಶ್ ಬಾಬು ಚಾಲನೆ ನೀಡಿದರು.   

ಗುಂಡ್ಲುಪೇಟೆ: ಪ್ರತಿಯೊಬ್ಬ ಮತದಾರರು ಮುಂಬರುವ ಲೋಕಾಸಭಾ ಚುನಾವಣೆಯಲ್ಲಿ  ಅರ್ಹ ಎಲ್ಲರೂ ಮತದಾನ ಮಾಡುವಂತೆ ತಹಶೀಲ್ದಾರ್ ಟಿ.ರಮೇಶ್ ಬಾಬು ಮನವಿ ಮಾಡಿದರು.

ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಸಂಬಂಧ ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ  ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿ ಪ್ಯಾಟ್ ಗಳ ಜಾಗೃತಿ ಮತ್ತು ಪ್ರಾತ್ಯಕ್ಷಿಕೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಸಾರ್ವಜನಿಕರಲ್ಲಿ ಮತದಾನದ  ಜಾಗೃತಿ ಮೂಡಿಸಲು ಈಗಾಗಲೇ 12 ಮಂದಿ ನೋಡೆಲ್ ಅಧಿಕಾರಿಗಳನ್ನು ಪ್ರತಿ ಮೂರು ಪಂಚಾಯಿತಿಗೆ ಒಬ್ಬರಂತೆ ನೇಮಕ ಮಾಡಲಾಗಿದೆ ಎಂದು ತಿಳಿಸಿದರು.

ನೋಡೆಲ್ ಅಧಿಕಾರಿಗಳು ಇಂದಿನಿಂದಲೇ ಪ್ರತಿ ಗ್ರಾಮಗಳಿಗೂ ಹೋಗಿ ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿ ಪ್ಯಾಟ್‌ಗಳ ಇವಿಎಂ ಯಂತ್ರದಲ್ಲಿ ಯಾವ ರೀತಿ ಮತದಾನ ಮಾಡಬೇಕು. 18 ವರ್ಷ ಪೂರೈಸಿ ಹೊಸದಾಗಿ ಮತದಾನ ಹಕ್ಕು ಪಡೆದವರಿಗೆ ಮತದಾನದ ಜಾಗೃತಿ ಮೂಡಿಸಲಿದ್ದಾರೆ.  ನಿಷ್ಪಕ್ಷಪಾತವಾಗಿ ಮತದಾನ ನಡೆಯಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಅನುಸರಿಸಲಾಗುತ್ತಿದೆ ಎಂದು ತಿಳಿಸಿದರು.  ಅಧಿಕಾರಿಗಳು, ವಿದ್ಯುನ್ಮಾನ ಮತಯಂತ್ರಗಳು ಹಾಗೂ ವಿವಿಪ್ಯಾಟ್ ಗಳ ಕುರಿತು ಪ್ರಾತ್ಯಕ್ಷಿಕೆ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಿದರು.

ADVERTISEMENT

ಕೃಷಿ ಇಲಾಖೆ ಸಹಾಯಕ ನಿದೇರ್ಶಕ ಶಶಿಧರ್, ಶಿರಸ್ತೇದಾರ್ ಮಹೇಶ್, ಗ್ರಾಮ ಆಡಳಿತ ಅಧಿಕಾರಿ ವಿನಯ್ ಕುಮಾರ್ ಸೇರಿದಂತೆ ಚುನಾವಣೆ ಮತ್ತು ಹಲವು ಮಂದಿ ನೋಡಲ್ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.