ಹನೂರು: ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಶಾಸಕ ಎಂ.ಆರ್.ಮಂಜುನಾಥ್, ಕನಕದಾಸರ ತತ್ವವನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದರು. ಪಟ್ಟಣದಲ್ಲಿ ಕನಕಭವನ ಪೂರ್ಣಗೊಳಿಸಿ, ಮುಂದಿನ ಆಚರಣೆಯನ್ನು ಕನಕಭವನದಲ್ಲೇ ಮಾಡಲು ಶ್ರಮಿಸಲಾಗುವುದು ಎಂದು ಭರವಸೆ ನೀಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷೆ . ಮುಮ್ತಾಜ್ ಭಾನು , ಉಪಾಧ್ಯಕ್ಷ ಆನಂದ್ ಕುಮಾರ್, ಸದಸ್ಯರಾದ ಸೋಮಶೇಖರ್, ಹರೀಶ್ ಕುಮಾರ್, ಸಂಪತ್, ತಹಸೀಲ್ದಾರ್ ವೈ.ಕೆ ಗುರುಪ್ರಸಾದ್, ಬಿಇಒ ಗುರುಲಿಂಗಯ್ಯ, ನಾಗೇಂದ್ರ, ಇಒ ಅಶೋಕ, ಚಾಮುಲ್ ನಿರ್ದೇಶಕ ಪ್ರಸಾದ್, ಮುಖಂಡರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.