ADVERTISEMENT

ಮೇಕೆದಾಟು ಯೋಜನೆಗೆ ತಡೆ: ತಮಿಳುನಾಡು ಸರ್ಕಾರ ವಜಾಕ್ಕೆ ಒತ್ತಾಯಿಸಿ ಮನವಿ

​ಪ್ರಜಾವಾಣಿ ವಾರ್ತೆ
Published 22 ಮಾರ್ಚ್ 2024, 13:37 IST
Last Updated 22 ಮಾರ್ಚ್ 2024, 13:37 IST
ಮೇಕೆದಾಟು ಯೋಜನೆಗೆ ತಡೆ ಒಡ್ಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು
ಮೇಕೆದಾಟು ಯೋಜನೆಗೆ ತಡೆ ಒಡ್ಡುವುದಾಗಿ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರವನ್ನು ವಜಾ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಅವರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಿದರು   

ಚಾಮರಾಜನಗರ: ಲೋಕಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಗೆದ್ದರೆ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿರುವ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆ ಒಡ್ಡುವುದಾಗಿ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿರುವ ತಮಿಳುನಾಡು ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾಪಡೆಯ ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮೂಲಕ ರಾಷ್ಟ್ರಪತಿಗೆ ಮನವಿ ರವಾನಿಸಿದರು. 

'ತಮಿಳುನಾಡಿನ ಆಡಳಿತಾರೂಢ ಡಿಎಂಕೆಯು ಲೋಕಸಭೆ ಚುನಾವಣೆ  ಸಂಬಂಧ ಬಿಡುಗಡೆ ಮಾಡಿದ ತನ್ನ ಪ್ರಣಾಳಿಕೆಯಲ್ಲಿ, ಕರ್ನಾಟಕದ ಉದ್ದೇಶಿಸಿತ ಮೇಕೆದಾಟು ಯೋಜನೆಗೆ ತಡೆ ಒಡ್ಡಲಾಗುವುದು ಎಂದು ಹೇಳಿದೆ. ಇದು ಖಂಡನೀಯ. ಇದು ದೇಶದ ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾದುದು’ ಎಂದು ಮನವಿಯಲ್ಲಿ ಹೇಳಲಾಗಿದೆ. 

‘ಚುನಾವಣೆ ಸಂದರ್ಭದಲ್ಲಿ ಬೇರೆ ರಾಜ್ಯದ ಕುಡಿಯುವ ನೀರಿನ ಯೋಜನೆಯ ಬಗ್ಗೆ ಮಾತನಾಡಿರುವುದು ಚುನಾವಣಾ ನೀತಿ ಸಂಹಿತೆಯನ್ನು ತಮಿಳುನಾಡು ಸರ್ಕಾರ ಉಲ್ಲಂಘನೆ ಮಾಡಿದಂತೆ ಆಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಲ್ಲಿನ ಮುಖ್ಯಮಂತ್ರಿ ಸ್ಟಾಲಿನ್ ಅಗೌರವ ತೋರಿಸಿದ್ದಾರೆ’ ಎಂದು ದೂರಲಾಗಿದೆ. 

ADVERTISEMENT

‘ಕರ್ನಾಟಕ ರಾಜ್ಯದ ಮೇಕೆ ದಾಟು ಯೋಜನೆ ಅನುಷ್ಠಾನಗೊಂಡರೆ ರಾಜ್ಯದ ಅನೇಕ ಜಿಲ್ಲೆಗಳಿಗೆ ಕುಡಿಯುವ ನೀರಿನ ಸೌಲಭ್ಯ ಸಿಗುತ್ತದೆ. ಕುಡಿಯುವ ನೀರಿನ ಯೋಜನೆಗೆ ಯಾವುದೇ ಕಾರಣಕ್ಕೂ ಯಾವುದೇ ಸರ್ಕಾರ, ವ್ಯಕ್ತಿ ಅಡ್ಡಿಪಡಿಸಲು ಸಾಧ್ಯವಿಲ್ಲ. ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಕುಡಿಯುವ ನೀರಿನ ಹಕ್ಕು ಪ್ರತಿಯೊಬ್ಬರಿಗೂ ಇದೆ. ತಮಿಳುನಾಡು ಸರ್ಕಾರವನ್ನು ವಜಾ ಮಾಡಿ ಅಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಬೇಕು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ. 

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸ ಗೌಡ, ಪುರುಷೋತ್ತಮ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ಶ್ರೀಗಂಧ  ಕನ್ನಡ ಯುವವೇದಿಕೆ ಅಧ್ಯಕ್ಷ ರವಿಚಂದ್ರಪ್ರಸಾದ್ ಕಹಳೆ ಭಾಗವಹಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.