ADVERTISEMENT

2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 4 ಜನವರಿ 2021, 8:21 IST
Last Updated 4 ಜನವರಿ 2021, 8:21 IST
ಪತ್ರಿಕಾಗೋಷ್ಠಿಯಲ್ಲಿ ಮಂಜಮ್ಮ ಜೋಗತಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಅಕಾಡೆಮಿ ಸದಸ್ಯ ನರಸಿಂಹಮೂರ್ತಿ ಇದ್ದರು.
ಪತ್ರಿಕಾಗೋಷ್ಠಿಯಲ್ಲಿ ಮಂಜಮ್ಮ ಜೋಗತಿ ಅವರು ಮಾತನಾಡಿದರು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಹಾಗೂ ಅಕಾಡೆಮಿ ಸದಸ್ಯ ನರಸಿಂಹಮೂರ್ತಿ ಇದ್ದರು.   

ಚಾಮರಾಜನಗರ: 2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಪ್ರಕಟಿಸಿದ್ದಾರೆ.

30 ಜಿಲ್ಲೆಗಳ ತಲಾ ಒಬ್ಬ ಜಾನಪದ ಕಲಾವಿದರು ಮತ್ತು ಇಬ್ಬರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಡಾ.ಗಾಯತ್ರಿ ನಾವಡ ಅವರನ್ನು ಡಾ.ಜೀ.ಶಂ.ಪ ಪ್ರಶಸ್ತಿಗೆ ಹಾಗೂ ಕಲ್ಬುರ್ಗಿ ಜಿಲ್ಲೆಯ ಪ್ರೊ.ಬಸವರಾಜ ಸಬರದ ಅವರನ್ನು ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ADVERTISEMENT

ಈ ಬಾರಿಯ ಪ್ರಶಸ್ತಿ ಪ್ರದಾನ ಸಮಾರಂಭ ಚಾಮರಾಜನಗರದಲ್ಲೇ ನಡೆಯಲಿದ್ದು, ಫೆಬ್ರುವರಿ ಮೊದಲ ವಾರದಲ್ಲಿ ಆಯೋಜಿಸಲಾಗುವುದು ಎಂದು ಮಂಜಮ್ಮ ಜೋಗತಿ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.