ADVERTISEMENT

ಕೊಳ್ಳೇಗಾಲ: ₹1.57 ಕೋಟಿ ಮೌಲ್ಯದ 2.170 ಕೆಜಿ ಚಿನ್ನಾಭರಣ ವಶ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2024, 15:43 IST
Last Updated 11 ಏಪ್ರಿಲ್ 2024, 15:43 IST
<div class="paragraphs"><p>ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ&nbsp;1,57,87,000 ರೂ. ಮೌಲ್ಯದ 2. 170 ಕೆಜಿ ತೂಕದ ಚಿನ್ನಾಭರಣಗಳನ್ನು&nbsp;ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.&nbsp;</p></div>

ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 1,57,87,000 ರೂ. ಮೌಲ್ಯದ 2. 170 ಕೆಜಿ ತೂಕದ ಚಿನ್ನಾಭರಣಗಳನ್ನು ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

   

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಚೆಕ್‌ಪೋಸ್ಟ್‌ನಲ್ಲಿ ಗುರುವಾರ ದಾಖಲೆಗಳಿಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 1,57,87,000 ರೂ. ಮೌಲ್ಯದ 2. 170 ಕೆಜಿ ತೂಕದ ಚಿನ್ನಾಭರಣಗಳನ್ನು ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 

ಕಾರು ಬೆಂಗಳೂರಿನಿಂದ ಕೊಳ್ಳೇಗಾಲಕ್ಕೆ ಬರುತ್ತಿತ್ತು. ಕಾರ್ತಿಕ್‌ ಮತ್ತು ಚಿರಾಂತ್‌ ಎಂಬುವವರು ಚಿನ್ನಾಭರಣಗಳನ್ನು ಸಾಗಿಸುತ್ತಿದ್ದರು. ಚೆಕ್‌ಪೋಸ್ಟ್‌ನಲ್ಲಿ ನಿಯೋಜನೆಗೊಂಡಿದ್ದ ಎಸ್‌ಟಿಎಫ್‌ ಅಧಿಕಾರಿಗಳು ಕಾರು ತಡೆದು ತಪಾಸಣೆ ನಡೆಸಿದಾಗ ಆಭರಣಗಳು ಪತ್ತೆಯಾಗಿವೆ. ಈ ಬಗ್ಗೆ ದಾಖಲೆಗಳು ಅವರ ಬಳಿ ಇರಲಿಲ್ಲ. ಹಾಗಾಗಿ, ಆಭರಣಗಳನ್ನು ಜಪ್ತಿ ಮಾಡಲಾಯಿತು. 

ADVERTISEMENT

‘ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆದಾಯ ತೆರಿಗೆ ಇಲಾಖೆಯ ಅನ್ವೇಷಣೆ ವಿಭಾಗದ ಸಹಾಯಕ ನಿರ್ದೇಶಕ ಆರ್. ರಂಗನಾಥ್, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಾದ ಜಿ.ರಘು, ಜಿ. ದಿವಾಕರ್ ಅವರಿಂದ ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ’ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿದ ಶಿಲ್ಪಾ ನಾಗ್ ತಿಳಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.