ಕೊಳ್ಳೇಗಾಲ: ಎಲ್ಲ ವ್ಯಕ್ತಿಗಳು ಶಿಕ್ಷಣವನ್ನು ಪಡೆದಾಗ ಮಾತ್ರ ನಾವು ಜಗತ್ತಿನಲ್ಲಿ ಶಾಂತಿ ಹೊಂದಲು ಸಾಧ್ಯ ಎಂದು ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಟಿ.ಸಿ ಶ್ರೀಕಾಂತ್ ಹೇಳಿದರು.
ನಗರದ ಗೀತಾ ಪ್ರೇಮರಿ ಶಾಲೆ ಆವರಣದಲ್ಲಿ ತಾಲ್ಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ , ಗೀತಾ ಪ್ರೈಮರಿ ಶಾಲೆ, ಎಂಸಿಕೆಸಿ ಪ್ರೌಢಶಾಲೆ ಆಶ್ರಯದಲ್ಲಿ ಆಯೋಜಿಸಿದ್ದ ಮಕ್ಕಳ ದಿನಾಚರಣೆ, ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ದೇಶದ ಸಂವಿಧಾನವು ಮಕ್ಕಳಿಗೆ ವಿಶೇಷ ಸ್ಥಾನ ನೀಡಿದೆ. ಪ್ರತಿ ಮಗುವೂ ಶಿಕ್ಷಣ ಪಡೆಯುವುದು ಮೂಲಭೂತ ಹಕ್ಕಾಗಿದೆ. ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣವನ್ನು ನೀಡಲು ಮುಂದಾಗಬೇಕು. ಮಕ್ಕಳ ಹಕ್ಕುಗಳ ಬಗ್ಗೆ ಪ್ರತಿಯೊಬ್ಬರು ಅರಿವನ್ನು ಪಡೆಯಬೇಕು. ಮಕ್ಕಳು ಮೊಬೈಲ್ ಸೇರಿದಂತೆ ವ್ಯಸನಿಗಳಾಗುತ್ತಿದ್ದಾರೆ. ಮಕ್ಕಳ ಬಗ್ಗೆ ಪೋಷಕರು ಹಾಗೂ ಶಿಕ್ಷಕರು ಗಮನಹರಿಸಿ, ಚಿಕ್ಕವಯಸ್ಸಿನಲ್ಲೇ ನಡವಳಿಕೆಯನ್ನು ತಿದ್ದಬೇಕು ಎಂದರು.
ವಕೀಲ ಡಿ. ವೆಂಕಟಾಚಲ ಮಾತನಾಡಿ, ಮಕ್ಕಳ ದಿನಾಚರಣೆಯ ಮಹತ್ವ ಕುರಿತು ಉಪನ್ಯಾಸ ನೀಡಿದರು.
ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಸುನಿತಾ, ವಕೀಲರ ಸಂಘದ ಅಧ್ಯಕ್ಷ ಸಿ. ರವಿ, ಉಪಾಧ್ಯಕ್ಷ ಸಿ.ಆರ್. ನಿರ್ಮಲ, ವಕೀಲ ಮಲ್ಲಿಕಾರ್ಜುನ, ಪ್ರಭಾರ ಮುಖ್ಯ ಶಿಕ್ಷಕ ವೆಂಕಟೇಶಮೂರ್ತಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.