ಚಾಮರಾಜನಗರ: ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಜಿಲ್ಲೆಯಾದ್ಯಂತ ದೇವಾಲಯಗಳಲ್ಲಿ ಅದರಲ್ಲೂ ವಿಶೇಷವಾಗಿ ಶಿವನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಕೈಂಕರ್ಯಗಳು ನೆರವೇರಿದವು.
ಭಕ್ತರು ಕುಟುಂಬ ಸಮೇತರಾಗಿ ದೇವಾಲಯಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯ, ಹರದನಹಳ್ಳಿಯ ದಿವ್ಯಲಿಂಗೇಶ್ವರ, ಯಡಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಹಲವು ದೇವಾಲಯಗಳಲ್ಲಿ ಭಕ್ತರ ಸಂದಣಿ ಹೆಚ್ಚಿತ್ತು. ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.
ನಗರದ ಚಾಮರಾಜೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿರುವ ಸಹಸ್ರಲಿಂಗೇಶ್ವರನಿಗೆ ನಡೆದ ಪೂಜೆಯಲ್ಲಿ ನೂರಾರು ಜನರು ಪಾಲ್ಗೊಂಡಿದ್ದರು. ಶಿವಲಿಂಗಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಗುಂಡ್ಲುಪೇಟೆ ತಾಲ್ಲೂಕಿನ ಹುಲುಗನಮುರಡಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೆಂಕಟರಮಣ ಸ್ವಾಮಿ ದೇವರಿಗೆ ರಾತ್ರಿ ಬೆಣ್ಣೆ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಪೂಜೆಯ ನಂತರ ದೇವಾಲಯದಲ್ಲಿ ಗರುಡೋತ್ಸವ ನೆರವೇರಿತು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.