ADVERTISEMENT

ರೈತರಿಗೆ ಉಪಯೋಗವಿಲ್ಲದ ಕೇಂದ್ರ ಸರ್ಕಾರ: ಶಾಸಕ ಎ.ಆರ್.ಕೃಷ್ಣಮೂರ್ತಿ 

ಸುನೀಲ್ ಬೋಸ್ ಪರ ಮತ ಯಾಚನೆ: ಶಾಸಕ ಎ.ಆರ್.ಕೃಷ್ಣಮೂರ್ತಿ 

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2024, 14:11 IST
Last Updated 13 ಏಪ್ರಿಲ್ 2024, 14:11 IST
ಸಂತೇಮರಹಳ್ಳಿ ಸಮೀಪದ ಮೂಡಲ ಅಗ್ರಹಾರ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತ ಯಾಚಿಸಿದರು
ಸಂತೇಮರಹಳ್ಳಿ ಸಮೀಪದ ಮೂಡಲ ಅಗ್ರಹಾರ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಮತ ಯಾಚಿಸಿದರು   

ಸಂತೇಮರಹಳ್ಳಿ: ಸಮೀಪದ ಮೂಡಲ ಅಗ್ರಹಾರ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್ ಪರವಾಗಿ ಈಚೆಗೆ ಮತ ಯಾಚಿಸಲಾಯಿತು.

ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕಾಂಗ್ರೆಸ್ ಆಡಳಿತದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಿಳಿಸುವ ಮೂಲಕ ಪಕ್ಷದ ಅಭ್ಯರ್ಥಿ ಗೆಲುವಿಗೆ ಕಾರ್ಯಕರ್ತರು ಶ್ರಮ ವಹಿಸಬೇಕು. ಈಗಾಗಲೇ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಪ್ರಿಯವಾಗಿದ್ದು, ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವವಾದ ಗೆಲುವು ತಂದು ಕೊಟ್ಟಿದ್ದಾರೆ. ಅದೇರೀತಿ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಬೇಕು. ಚಾಮರಾಜನಗರ ಜಿಲ್ಲೆಯು ಕಾಂಗ್ರೆಸ್ ಭದ್ರ ಕೋಟೆಯಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇನ್ನು ಹೆಚ್ಚಿನ ಮತಗಳು ಬರಬೇಕು. ಪ್ರಧಾನಿ ನರೇಂದ್ರ ಮೋದಿ ಅವರಿಂದ ದೇಶದ ಬಡವರು ಹಾಗೂ ರೈತರಿಗೆ ಯಾವುದೇ ಉಪಯೋಗವಾಗಿಲ್ಲ. ಶ್ರೀಮಂತರ ಪರವಾಗಿ ಆಡಳಿತ ನಡೆಸುತ್ತಿರುವ ಕೇಂದ್ರ ಸರ್ಕಾರವನ್ನು ಈ ಚುನಾವಣೆಯಲ್ಲಿ ಬದಲಿಸಬೇಕು ಎಂದು ಮನವಿ ಮಾಡಿದರು.

ADVERTISEMENT

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ಚಂದ್ರು, ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯೋಗೇಶ್, ಮಾಜಿ ಸದಸ್ಯ ಕೆ.ಪಿ.ಸದಾಶಿವಮೂರ್ತಿ, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ಮುಖಂಡರಾದ ಪ್ರಭುಪ್ರಸಾದ್, ವಾಲೆ ಮಹದೇವ, ಪಶಿ, ಡಿ.ಪಿ.ಪ್ರಕಾಶ್, ಚೇತನ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.