ಚಾಮರಾಜನಗರ: ಗುಂಡ್ಲುಪೇಟೆಯಲ್ಲಿರುವ ಆರ್‌ಟಿಒ ಚೆಕ್‌ಪೋಸ್ಟ್‌ನಲ್ಲಿ ಲೋಕಾಯುಕ್ತ ಪೊಲೀಸರು, ಶುಕ್ರವಾರ ಬೆಳಿಗ್ಗೆ ಶೋಧ ಕಾರ್ಯ ನಡೆಸಿದ್ದು, ₹9,779 ಅಕ್ರಮ ನಗದನ್ನು ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧ ಎಂಟು ಜಿಲ್ಲೆಗಳ ಅಂತರರಾಜ್ಯ ಆರ್‌ಟಿಒ ಚೆಕ್‌ಪೋಸ್ಟ್‌ಗಳಲ್ಲಿ ಅಧಿಕಾರಿಗಳು ಶೋಧನೆ ನಡೆಸಿದ್ದು, ಅದರಲ್ಲಿ ಗುಂಡ್ಲುಪೇಟೆಯ ಚೆಕ್‌ಪೋಸ್ಟ್ ಕೂಡ ಒಂದು.
ಲೋಕಾಯುಕ್ತ ಮೈಸೂರು ವಿಭಾಗದ ವರಿಷ್ಠಾಧಿಕಾರಿ ಸುರೇಶ್ ಬಾಬು ಅವರ ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್‌ಪಿಗಳಾದ ಎಸ್.ಟಿ.ಒಡೆಯರ್, ಮಾಲತೀಶ್ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್‌ಗಳಾದ ರವಿಕುಮಾರ್, ಲೋಕೇಶ್ ಮತ್ತು ಜಯರತ್ನ ಅವರನ್ನೊಳಗೊಂಡ ತಂಡ ಶೋಧ ನಡೆಸಿದೆ.
ತಪಾಸಣೆ ವೇಳೆ ₹9,779 ಅಕ್ರಮ ನಗದು ಪತ್ತೆಯಾಗಿದ್ದು, ಅದನ್ನು ಜಪ್ತಿ ಮಾಡಿ ತನಿಖೆ ಮುಂದುವರಿಸಲಾಗಿದೆ ಎಂದು ಲೋಕಾಯುಕ್ತ ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.