ADVERTISEMENT

ಭರಚುಕ್ಕಿ ಜಲಪಾತ ವೀಕ್ಷಣೆಗೆ ಪ್ರವಾಸಿಗರ ದಂಡು

​ಪ್ರಜಾವಾಣಿ ವಾರ್ತೆ
Published 10 ಜುಲೈ 2022, 17:43 IST
Last Updated 10 ಜುಲೈ 2022, 17:43 IST
ಕೊಳ್ಳೇಗಾಲ ತಾಲ್ಲೂಕಿನ ಸುಪ್ರಸಿದ್ಧ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದ್ದು ಭಾನುವಾರ ಸಾವಿರಾರು ಮಂದಿ  ವೀಕ್ಷಣೆ ಮಾಡಿದರು.
ಕೊಳ್ಳೇಗಾಲ ತಾಲ್ಲೂಕಿನ ಸುಪ್ರಸಿದ್ಧ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದ್ದು ಭಾನುವಾರ ಸಾವಿರಾರು ಮಂದಿ  ವೀಕ್ಷಣೆ ಮಾಡಿದರು.   

ಕೊಳ್ಳೇಗಾಲ: ತಾಲ್ಲೂಕಿನ ಸುಪ್ರಸಿದ್ಧ ಭರಚುಕ್ಕಿ ಜಲಪಾತ ಭೋರ್ಗರೆಯುತ್ತಿದ್ದು, ಭಾನುವಾರ ಸಾವಿರಾರು ಮಂದಿ ವೀಕ್ಷಣೆ ಮಾಡಿದ್ದಾರೆ.

ಕಬಿನಿ ಹಾಗೂ ಕೆಆರ್‌ಎಸ್‌ಜಲಾಶಯಗಳಿಂದ ನೀರು ಬಿಟ್ಟ ಕಾರಣ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿದ್ದು, ಜಲಾಪಾತದಲ್ಲಿ ನೀರು ಹಾಲ್ನೊರೆಯಂತೆ ದುಮ್ಮಿಕ್ಕುತ್ತಿದೆ.

ಮುಂಗಾರು ಪೂರ್ವ ಅವಧಿಯಲ್ಲಿ ಉತ್ತಮ ಮಳೆಯಾಗಿದ್ದ ಸಂದರ್ಭದಲ್ಲಿ ನೀರಿನ ಮಟ್ಟ ಹೆಚ್ಚಾಗಿ ಜಲಪಾತಕ್ಕೆ ಜೀವಕಳೆ ಬಂದಿತ್ತು. ಮಳೆ ಕಡಿಮೆಯಾದ ನಂತರ ನೀರಿನ ಹರಿಯುವಿಕೆ ಕಡಿಮೆಯಾಗಿತ್ತು. ಈಗ ಸತತವಾಗಿ ಸುರಿಯುತ್ತಿರುವ ಮಳೆಯಿಂದ ಮತ್ತೆ ಜಲಪಾತ ಭೋರ್ಗರೆದು ಪ್ರವಾಸಿಗರನ್ನು ಸೆಳೆಯುತ್ತಿದೆ.

ADVERTISEMENT

ಜಿಲ್ಲೆ, ಹೊರ ಜಿಲ್ಲೆಗಳ ಪ್ರವಾಸಿಗರು ಭರಚುಕ್ಕಿಗೆ ಭೇಟಿ ನೀಡುತ್ತಿದ್ದು, ಶನಿವಾರ ಭಾನುವಾರ ಜನರ ಸಂಖ್ಯೆ ಹೆಚ್ಚಾಗಿತ್ತು.

‘ಬೆಂಗಳೂರು, ಮೈಸೂರು, ಮಂಡ್ಯದ ಪ್ರವಾಸಿಗರೇ ಹೆಚ್ಚಾಗಿ ಬರುತ್ತಿದ್ದಾರೆ. ಪ್ರತಿವರ್ಷ ನಾವು ಕುಟುಂಬ ಸಮೇತ ಬಂದು ಜಲಪಾತ ವೀಕ್ಷಣೆ ಮಾಡಿ ಹೋಗುತ್ತೇವೆ. ಈ ವರ್ಷ ಒಂದು ತಿಂಗಳ ಮೊದಲೇ ವೀಕ್ಷಣೆಗೆ ಬಂದಿದ್ದೇವೆ’ ಎಂದು ಮೈಸೂರಿನ ವಿಲಿಯಮ್ಸ್‌ ಕುಟುಂಬದವರು ‘ಪ್ರಜಾವಾಣಿ’ಗೆ ತಿಳಿಸಿದರು.

‘ನೀರಿನ ಪ್ರಮಾಣ ಹೆಚ್ಚಾದ ಕಾರಣ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಬರುತ್ತಿದ್ದಾರೆ. ಮಳೆ ಹೀಗೆ ಮುಂದುವರಿದರೆ ನೀರಿನ ಪ್ರಮಾಣ ಇನ್ನೂ ಹೆಚ್ಚಳವಾಗಲಿದೆ’ ಎಂದು ಮಲೆ ಮಹದೇಶ್ವರ ವನ್ಯಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ವಿ.ಏಡುಕುಂಡಲು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.