ಚಾಮರಾಜನಗರ: ‘ಪಾಕಿಸ್ತಾನದ ಏಜೆಂಟ್‌ಗಳು ದೇಶದಲ್ಲಿ ಸಕ್ರಿಯರಾಗಿದ್ದಾರೆ. ಅವರು ಮಂಗಳೂರು, ಕೇರಳ, ದೆಹಲಿ ಸೇರಿದಂತೆ ಎಲ್ಲೇ ಹುಟ್ಟಿಕೊಳ್ಳಲಿ ಅವರನ್ನು ಸದೆಬಡಿಯುತ್ತೇವೆ’ ಎಂದು ಕೇಂದ್ರ ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಖಾತೆ ರಾಜ್ಯ ಸಚಿವ ನಾರಾಯಣಸ್ವಾಮಿ ಹೇಳಿದರು.
ಶನಿವಾರ ಮಾತನಾಡಿದ ಅವರು, ‘ಪಾಕಿಸ್ತಾನ ಪರ ಘೋಷಣೆ ಕೂಗುವ ಪ್ರವೃತ್ತಿ ಜಮ್ಮು ಮತ್ತು ಕಾಶ್ಮೀರದಲ್ಲಿ ಆರಂಭವಾಗಿದ್ದರಿಂದ 370ನೇ ವಿಧಿ ರದ್ದುಗೊಳಿಸಲಾಯಿತು. ಹಿಂದಿನ ಸರ್ಕಾರಗಳು ಈ ಪರಿಸ್ಥಿತಿಯನ್ನು ನಿರ್ವಹಿಸಲು ವಿಫಲವಾಗಿದ್ದವು. ಈಗ ಪಾಕಿಸ್ತಾನದಲ್ಲಿ ಸರ್ಕಾರ ಬದಲಾದಾಗ ಮತ್ತೆ ಈ ಪ್ರವೃತ್ತಿ ಹುಟ್ಟಿಕೊಂಡಿದೆ. ಅದನ್ನು ನಿಗ್ರಹಿಸುವ ಶಕ್ತಿ ಭಾರತಕ್ಕಿದೆ’ ಎಂದರು.
‘ಪಾಕಿಸ್ತಾನದ ಏಜೆಂಟ್‌ಗಳಂತೆ ವರ್ತಿಸುವವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರ ಶಕ್ತವಾಗಿವೆ. ಕವಲಂದೆ ಪ್ರಕರಣದಲ್ಲೂ ಇಬ್ಬರನ್ನು ಬಂಧಿಸಲಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.