ADVERTISEMENT

ಗುಂಡ್ಲುಪೇಟೆ | ಹೋಟೆಲ್, ಬೇಕರಿಗಳಿಗೆ ನೋಟಿಸ್‌

ಪುರಸಭೆ , ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2024, 14:44 IST
Last Updated 21 ನವೆಂಬರ್ 2024, 14:44 IST
ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡದ ಹೋಟೆಲ್ ಮತ್ತು ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿ ಶ್ರೀನಿವಾಸ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ನೊಟೀಸ್ ಜಾರಿ ಮಾಡಿದರು
ಗುಂಡ್ಲುಪೇಟೆ ಪಟ್ಟಣ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡದ ಹೋಟೆಲ್ ಮತ್ತು ಬೇಕರಿಗಳ ಮೇಲೆ ಆಹಾರ ಸುರಕ್ಷತಾ ಅಧಿಕಾರಿ ಶ್ರೀನಿವಾಸ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ನೊಟೀಸ್ ಜಾರಿ ಮಾಡಿದರು   

ಗುಂಡ್ಲುಪೇಟೆ: ಪಟ್ಟಣ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡದ ಹೋಟೆಲ್ ಮತ್ತು ಬೇಕರಿಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳ ತಂಡ ಪುರಸಭೆ ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ನಡೆಸಿ ನೋಟೀಸ್ ಜಾರಿ ಮಾಡಿದರು.

ಪಟ್ಟಣದ ವಿವಿಧ ಹೋಟೆಲ್‌ಗಳು ಹಾಗೂ ಬೇಕರಿಗಳಲ್ಲಿ ಸ್ವಚ್ಛತೆ ಆಹಾರ ಮತ್ತು ತಿಂಡಿ, ತಿನಿಸುಗಳನ್ನು ಮಾರಾಟ ಮಾಡುತ್ತಿರುವ ಕುರಿತು ದೂರು ಬಂದದ್ದರಿಂದ ಕಾರ್ಯಾಚರಣೆ ನಡೆಸಿದ್ದರು.  ಗುಂಡ್ಲುಪೇಟೆ ವಲಯದ ಆಹಾರ ಸುರಕ್ಷತಾ ಅಧಿಕಾರಿ ಶ್ರೀನಿವಾಸ್ ನೇತೃತ್ವದ ತಂಡ  ತಿಂಡಿ ತಯಾರಿಸುವ ಜಾಗ ಮತು ಪದಾರ್ಥಗಳ ಗುಣಮಟ್ಟ ಪರಿಶೀಲನೆ ನಡೆಸಿದರು.

 ಹತ್ತಕ್ಕೂ ಹೆಚ್ಚು ಮಂದಿ ಹೋಟೆಲ್, ಬೇಕರಿ ಮಾಲೀಕರು ಪರವಾನಗಿ ಇಲ್ಲದೆ ಹೋಟೆಲ್ ನಡೆಸುತ್ತಿರುವುದು, ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಅನುಮತಿ ಪಡೆಯದೇ ವ್ಯವಹಾರ ಮಾಡುತ್ತಿರುವುದು ಕಂಡುಬಂತು. ಇವರಿಗೆ  ನೊಟೀಸ್ ಜಾರಿ ಮಾಡಿ ಕಾನೂನು ಕ್ರಮದ ಎಚ್ಚರಿಕೆ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.