ADVERTISEMENT

ಕೊಳ್ಳೇಗಾಲ: ನರೇಗಾ ಕೂಲಿಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2024, 15:53 IST
Last Updated 17 ಜೂನ್ 2024, 15:53 IST
ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದಲ್ಲಿ ನರೇಗಾ ಕೂಲಿ ಹಣ ನೀಡುವಂತೆ ಒತ್ತಾಯಿಸಿ ಸೋಮವಾರ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು
ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದಲ್ಲಿ ನರೇಗಾ ಕೂಲಿ ಹಣ ನೀಡುವಂತೆ ಒತ್ತಾಯಿಸಿ ಸೋಮವಾರ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು   

ಕೊಳ್ಳೇಗಾಲ: ತಾಲ್ಲೂಕಿನ ಹರಳೆ ಗ್ರಾಮದಲ್ಲಿ ನರೇಗಾ ಕೂಲಿ ಹಣ ನೀಡುವಂತೆ ಒತ್ತಾಯಿಸಿ ಸೋಮವಾರ ಮಹಿಳಾ ಕೂಲಿ ಕಾರ್ಮಿಕರು ಪ್ರತಿಭಟನೆ ನಡೆಸಿದರು.

ಗ್ರಾಮದ ಪಂಚಾಯಿತಿ ಮುಂದೆ ಜಮಾಯಿಸಿದ್ದ ನೂರಾರು ಮಹಿಳಾ ಕಾರ್ಮಿಕರು ನರೇಗಾ ಯೋಜನೆಯಡಿ ಕೆಲಸ ಮಾಡಿರುವ ಹಣವನ್ನು ನೀಡುವಂತೆ ಒತ್ತಾಯಿಸಿ ಪಂಚಾಯಿತಿ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

ಸೋಮವಾರ ರಜೆ ಇದ್ದ ಕಾರಣ ಪೋನ್ ಮೂಲಕ ಮೇಲಾಧಿಕಾರಿಗಳನ್ನು ಸಂಪರ್ಕಿಸಿ ತಮ್ಮ ಅಳಲನ್ನು ಹೇಳಿಕೊಂಡು ನಾಳೆ ಕೂಲಿ ಹಣ ನೀಡದಿದ್ದರೇ ಗ್ರಾಮ ಪಂಚಾಯಿತಿ ಕಚೇರಿಯನ್ನು ಮುಚ್ಚಲಾಗುವುದು ಎಂದು ಎಚ್ಚರಿಕೆ ನೀಡಿ ಪ್ರತಿಭಟನೆಯನ್ನು ಕೈಬಿಟ್ಟರು.

ADVERTISEMENT

ಪ್ರತಿಭಟನೆಯಲ್ಲಿ ರಾಣಿ, ಮಾನಸ, ಪುಟ್ಟಸಿದ್ದಮ್ಮ, ಚಂದ್ರಮ್ಮ, ಮಹದೇವಮ್ಮ, ಚೌಡಮ್ಮ, ರತ್ನಮ್ಮ, ಭಾಗ್ಯಮ್ಮ, ಸುಂದರಮ್ಮ, ಚಂದ್ರಕ್ಕ, ರಾಜಮ್ಮ , ಶಿವಮ್ಮ, ಗೌರಮ್ಮ, ಗವಿಸಿದ್ದಮ್ಮ, ಪ್ರೀಯ ಹಾಗೂ ಎಲ್ಲಾ ಕೂಲಿ ಕಾರ್ಮಿಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.