ಹನೂರು: ಬೇಸಿಗೆಯಲ್ಲಿ ಸಾರ್ವಜನಿಕರ ದಾಹ ನೇಗಿಸಬೇಕಿದ್ದ ಶುದ್ಧ ಕುಡಿಯುವ ನೀರಿನ ಬಹುತೇಕ ಘಟಕಗಳು ಕೆಟ್ಟು ನಿಂತಿದ್ದು, ಜನರ ಉಪಯೋಗಕ್ಕೆ ಬಾರದಂತಾಗಿವೆ.
ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಉದ್ದಟ್ಟಿ, ಹಾವಿನಮೂಲೆ, ಬಸವನಗುಡಿಯಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕವು ಕೆಟ್ಟು ನಿoತು ಸುಮಾರು ಎರಡು ವರ್ಷಗಳೇ ಕಳೆದಿದ್ದರೂ ಇದರ ಬಗ್ಗೆ ತಾಲ್ಲೂಕು ಮಟ್ಟದ ಅಧಿಕಾರಿಗಳಾಗಲಿ ಅಥವಾ ಸಂಬಂಧಿಸಿದ ಗ್ರಾಮ ಪಂಚಾಯತಿ ಅಧಿಕಾರಿಗಳಾಗಲಿ ಗಮನಹರಿಸಿಲ್ಲವಾದ್ದರಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಘಟಕಗಳು ನಿರುಪಯುಕ್ತವಾಗಿ ನಿಂತಿವೆ.
ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತು ಮೂರು ವರ್ಷವೇ ಕಳೆದಿವೆ. ಕುಡಿಯುವ ನೀರಿಗೆ ತುಂಬಾ ತೊಂದರೆಯಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಆಡಳಿತವಾಗಲಿ ಅಥವಾ ಸಂಬಂಧಿಸಿದ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಾಗಲಿ ನಿರ್ಲಕ್ಷ್ಯ ವಹಿಸಿದ್ದಕ್ಕೆ ಕಾರಣ ಗೊತ್ತಿಲ್ಲ. ಅಧಿಕಾರಿಗಳ ಬೇಜವಾಬ್ದಾರಿ ಮತ್ತು ನಿರ್ಲಕ್ಷ್ಯದಿಂದ ಸಾರ್ವಜನಿಕರು ಮೂಲ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಸರ್ಕಾರವು ಗ್ರಾಮೀಣ ಜನತೆಯ ಅರೋಗ್ಯ ದೃಷ್ಟಿಯಿಂದ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕ ವ್ಯರ್ಥವಾಗಿವೆ’ ಎಂದು ಉದ್ದಟಿ ಗ್ರಾಮದ ಮಾದೇವ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.