ADVERTISEMENT

ಚಾಮರಾಜನಗರ: ರಸ್ತೆ ಸುರಕ್ಷತೆ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 14 ಜುಲೈ 2024, 16:03 IST
Last Updated 14 ಜುಲೈ 2024, 16:03 IST
ಚಾಮರಾಜನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಖಾಸಗಿ ವಾಹನ ಚಾಲಕರು ಹಾಗೂ ಮಾಲೀಕರಿಗೆ ಹಮ್ಮಿಕೊಂಡಿದ್ದ ಸಂಚಾರ ಮತ್ತು ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಪೊಲೀಸ್ ಅಧಿಕಾರಿಗಳು ಉದ್ಘಾಟಿಸಿದರು. ಎಸ್‌ಪಿ ಡಾ.ಬಿ.ಟಿ.ಕವಿತಾ ಪಾಲ್ಗೊಂಡಿದ್ದರು

ಚಾಮರಾಜನಗರ: ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಖಾಸಗಿ ವಾಹನ ಚಾಲಕರು ಹಾಗೂ ಮಾಲೀಕರಿಗೆ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ ಜಾಗೃತಿ ಅಭಿಯಾನ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೂಡ್ಸ್ ಆಟೊ, ಪ್ಯಾಸೆಂಜರ್ ಆಟೊ, ಕ್ಯಾಬ್, ಲಾರಿ ಹಾಗೂ ಇತರ ಖಾಸಗಿ ವಾಹನಗಳ ಚಾಲಕರು ಹಾಗೂ ಮಾಲೀಕರು ಸೇರಿದಂತೆ 150 ಮಂದಿ ಭಾಗವಹಿಸಿದ್ದರು. ಎಸ್‌ಪಿ ಡಾ.ಬಿ.ಟಿ.ಕವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಸಂಚಾರ ನಿಯಮಗಳು ಹಾಗೂ ಸುರಕ್ಷತೆಯ ಬಗ್ಗೆ ಮಾಹಿತಿ ನೀಡಿದರು. ಬಳಿಕ ಚಾಲಕರು ಹಾಗೂ ಮಾಲೀಕ ಕುಂದುಕೊರತೆ ಆಲಿಸಲಾಯಿತು.

ಕಾರ್ಯಕ್ರಮದಲ್ಲಿ ಹೆಚ್ಚುವರಿ ಎಸ್‌ಪಿ ಉದೇಶ್‌, ಡಿವೈಎಸ್‌ಪಿ ಲಕ್ಷ್ಮಯ್ಯ ಸೇರಿದಂತೆ ಹಲವು ಅಧಿಕಾರಿಗಳು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.