ADVERTISEMENT

ಬಾಲ್ಯ ವಿವಾಹ ತಡೆ ಅಗತ್ಯ: ಪಿಡಿಒ

ಮಕ್ಕಳ ಗ್ರಾಮ ಪಂಚಾಯಿತಿ ಅರಿವಿನ ಹಬ್ಬ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2024, 13:46 IST
Last Updated 14 ನವೆಂಬರ್ 2024, 13:46 IST
ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮಕ್ಕಳ ಗ್ರಾಮ ಪಂಚಾಯಿತಿ ಅರಿವಿನ ಹಬ್ಬ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ ಮಾತನಾಡಿದರು.
ಸಂತೇಮರಹಳ್ಳಿ ಸಮೀಪದ ಕುದೇರು ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮಕ್ಕಳ ಗ್ರಾಮ ಪಂಚಾಯಿತಿ ಅರಿವಿನ ಹಬ್ಬ ಕಾರ್ಯಕ್ರಮದಲ್ಲಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ ಮಾತನಾಡಿದರು.   

ಸಂತೇಮರಹಳ್ಳಿ: ಬಾಲ್ಯ ವಿವಾಹ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಪೋಷಕರು ಎಚ್ಚರ ವಹಿಸಬೇಕು ಎಂದು ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ ಅಭಿಪ್ರಾಯಪಟ್ಟರು.

ಸಮೀಪದ ಕುದೇರು ಗ್ರಾಮ ಪಂಚಾಯಿತಿ ವತಿಯಿಂದ ಗುರುವಾರ ನಡೆದ ‘ಮಕ್ಕಳ ಗ್ರಾಮ ಪಂಚಾಯಿತಿ ಅರಿವಿನ ಹಬ್ಬ’ದಲ್ಲಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಬಾಲ್ಯ ವಿವಾಹ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸುತ್ತಿದೆ. ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಬಾಲ್ಯ ವಿವಾಹ  ಕದ್ದು ಮುಚ್ಚಿ ನಡೆಯುತ್ತಿದೆ. ಮಕ್ಕಳ ವಿವಾಹ ನಿರ್ಮೂಲನೆಗೆ ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿದೆ. ಜತೆಗೆ ಪೋಷಕರು ಬಾಲ್ಯ ವಿವಾಹದಿಂದಾಗುವ ದುಷ್ಪರಿಣಾಮದ ಬಗ್ಗೆ ಅರಿವು ಮೂಡಿಸಿಕೊಳ್ಳಬೇಕು ಎಂದರು.

ADVERTISEMENT

ಸಾರ್ವಜನಿಕವಾಗಿ ಅನೈರ್ಮಲ್ಯದಿಂದ ಉಂಟಾಗುವ ತೊಂದರೆ, ಸ್ವಚ್ಛತೆ ಬಗ್ಗೆ ವಿದ್ಯಾರ್ಥಿಗಳು ಜನರಲ್ಲಿ  ಜಾಗೃತಿ ಮೂಡಿಸಬೇಕು. ವಿದ್ಯಾರ್ಥಿಗಳು  ಪತ್ರಿಕೆ, ಪುಸ್ತಕ, ಕಥೆ, ಕಾದಂಬರಿ, ಪುಸ್ತಕಗಳನ್ನು ಓದುವುದರಿಂದ ಜ್ಞಾನ ಹೆಚ್ಚಾಗುತ್ತದೆ.  ಓದಿನ ಕಡೆಗೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅರಿವು ಕೇಂದ್ರ, ಕೂಸಿನಮನೆ, ಕಸ ವಿಲೇವಾರಿ ಘಟಕ, ಗ್ರಾಮ ಪಂಚಾಯಿತಿ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಗೆ ದೊರಕುವ ಮಾಹಿತಿ ಬಗ್ಗೆ ಅರಿವು ಮೂಡಿಸಲಾಯಿತು.

ಉಪಾಧ್ಯಕ್ಷ ಶಿವಣ್ಣ, ಸದಸ್ಯರಾದ ಜಯಶಂಕರ್, ಕೆ.ಎಂ.ಅಶೋಕ್, ಅರಿವು ಕೇಂದ್ರದ ಮೇಲ್ವಿಚಾರಕ ಪ್ರಭುಲಿಂಗಸ್ವಾಮಿ, ಮುಖಂಡ ಸುಂದರ್‌ಶೆಟ್ಟಿ, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.