ADVERTISEMENT

ಕೊಳ್ಳೇಗಾಲ | ಅಧಿಕಾರಿಗಳಿಂದ ಸ್ಟ್ರಾಂಗ್ ರೂಮ್ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2024, 15:06 IST
Last Updated 19 ಮಾರ್ಚ್ 2024, 15:06 IST
ಕೊಳ್ಳೇಗಾಲ ಇಲ್ಲಿನ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಟ್ರಾಂಗ್ ರೂಮ್ ಗಳನ್ನು ಉಪ ವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ತಹಶೀಲ್ದಾರ್ ಮಂಜುಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿದರು.
ಕೊಳ್ಳೇಗಾಲ ಇಲ್ಲಿನ ಶ್ರೀ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಟ್ರಾಂಗ್ ರೂಮ್ ಗಳನ್ನು ಉಪ ವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ತಹಶೀಲ್ದಾರ್ ಮಂಜುಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿದರು.   

ಕೊಳ್ಳೇಗಾಲ: ಇಲ್ಲಿನ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸ್ಟ್ರಾಂಗ್ ರೂಮ್‌‌ಗಳನ್ನು ಉಪ ವಿಭಾಗಾಧಿಕಾರಿ ಶಿವಮೂರ್ತಿ ಹಾಗೂ ತಹಶೀಲ್ದಾರ್ ಮಂಜುಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿದರು.

ಮಂಗಳವಾರ ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿ ಪ್ರತಿಯೊಂದು ಕೊಠಡಿಗಳನ್ನು ವೀಕ್ಷಣೆ ಮಾಡಿದರು. ಬಳಿಕ ಮೂಲಭೂತ ಸೌಕರ್ಯ ಸೇರಿ ಮತಯಂತ್ರ ಭದ್ರವಾಗಿ ಇಡಬೇಕು ಎಂಬುದನ್ನು ಪರಿಶೀಲನೆ ನಡೆಸಿ ಚರ್ಚಿಸಿದರು.

ಬಳಿಕ ಕೆಲವು ಕೊಠಡಿಗಳಿಗೆ ಕಿಟಕಿ, ಬಾಗಿಲು ಹಾಳಾಗಿದ್ದನ್ನು ಗಮನಿಸಿದ ಅಧಿಕಾರಿಗಳು ಇವುಗಳನ್ನು ಸರಿಪಡಿಸಿ ಮತ ಯಂತ್ರ ಇಡಬೇಕು ಎಂದು ಸೂಚನೆ ನೀಡಿದರು. ಅದಲ್ಲದೆ, ಕಾಲೇಜಿನ ಸುತ್ತ 144 ಸೆಕ್ಷನ್ ಜಾರಿಯಲ್ಲಿರುತ್ತದೆ.  ಸುತ್ತಮುತ್ತ ಯಾರೂ ಬರುವಂತಿಲ್ಲ. ಅಧಿಕಾರಿಗಳು ಹಾಗೂ ಪೊಲೀಸರು ಹದ್ದಿನ ಕಣ್ಣಿಡಬೇಕು ಎಂದು ಹೇಳಿದರು.

ADVERTISEMENT

ಈ ಸಂದರ್ಭದಲ್ಲಿ ಡಿ.ವೈ.ಎಸ್.ಪಿ ಧರ್ಮೇಂದ್ರ ಸೇರಿ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.