ಕೊಳ್ಳೇಗಾಲ: ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಮರಕ್ಕೆ ನೇಣು ಹಾಕಿಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಯಳಂದೂರು ತಾಲ್ಲೂಕಿನ ಹೊನ್ನೂರು ಗ್ರಾಮದ ನಿಂಗರಾಜು(45) ಆತ್ಮಹತ್ಯೆ ಮಾಡಿಕೊಂಡವರು.
ಒಂದು ವಾರದಿಂದಲೂ ತಾಲ್ಲೂಕಿನ ದೊಡ್ಡಿಂದುವಾಡಿ ಗ್ರಾಮದ ಪತ್ನಿ ಮನೆಯಲ್ಲಿ ವಾಸವಿದ್ದರು. ನಿಂಗರಾಜು ಮದ್ಯದ ಚಟಕ್ಕೆ ದಾಸರಾಗಿದ್ದರು. ಮೂರು ದಿನಗಳ ಹಿಂದೆ ಪತಿ–ಪತ್ನಿ ನಡುವೆ ಸಣ್ಣ ಪುಟ್ಟ ಜಗಳಗಳು ನಡೆಯುತ್ತಿದ್ದವು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ನಿಂಗರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.