ಚಾಮರಾಜನಗರ: ಹನೂರು ತಾಲ್ಲೂಕಿನಸುಳ್ವಾಡಿ ಮಾರಮ್ಮ ದೇವಾಲಯದಲ್ಲಿ ಸಂಭವಿಸಿದ ವಿಷ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರುಮಂಗಳವಾರಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಬಸವರಾಜ ಅವರ ಮುಂದೆ ಹಾಜರುಪಡಿಸಿದರು.
ಆರೋಪಿಗಳಾದ ಇಮ್ಮಡಿ ಮಹದೇವಸ್ವಾಮಿ, ಅಂಬಿಕಾ, ದೊಡ್ಡಯ್ಯ ಮತ್ತು ಮಾದೇಶ ಅವರ ಪರ ವಕೀಲರು ವಿಚಾರಣೆಗೆ ಬಂದಿರಲಿಲ್ಲ.
‘ವಕೀಲರನ್ನು ನೇಮಿಸಿಕೊಂಡಿದ್ದೀರಾ’ ಎಂದು ಆರೋಪಿಗಳನ್ನು ನ್ಯಾಯಾಧೀಶರು ಪ್ರಶ್ನಿಸಿದರು.
ಇದಕ್ಕೆ ಪ್ರತಿಕ್ರಿಯಿಸದೆ ಇದ್ದಾಗ,‘ಶೀಘ್ರವೇ ವಕೀಲರನ್ನು ನೇಮಿಸಿಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರಿ ವಕೀಲರನ್ನು ನೇಮಿಸಲಾಗುವುದು’ ಎಂದು ಹೇಳಿದ ಬಸವರಾಜ ಅವರು ವಿಚಾರಣೆಯನ್ನುಇದೇ 25ಕ್ಕೆ ಮುಂದೂಡಿದರು.
ಇದನ್ನೂ ಓದಿ:ಸುಳ್ವಾಡಿದುರಂತ: ನ್ಯಾಯಾಂಗ ಬಂಧನ ವಿಸ್ತರಣೆ
ಡಿಸೆಂಬರ್ 14ರಂದು ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ 19ರಂದು ಬಂಧನಕ್ಕೆ ಒಳಗಾಗಿರುವ ನಾಲ್ವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲೇ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.