ಗುಂಡ್ಲುಪೇಟೆ: ಬಂಡೀಪುರ ಅರಣ್ಯಕ್ಕೆ ಹೊಂದಿಕೊಂಡಿರುವತಮಿಳುನಾಡಿನ ಮಧುಮಲೆ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ನೆಲೆಕೊಟ್ಟೈ ವಲಯದ ಪಾಟ್ಟವಯಲ್ ಬಳಿ 8 ವರ್ಷದ ಗಂಡು ಹುಲಿಯ ಮೃತದೇಹ ಪತ್ತೆಯಾಗಿದೆ.
ಎರಡು ಮೂರು ದಿನಗಳ ಹಿಂದೆಯೇ ಹುಲಿ ಮೃತಪಟ್ಟಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ಸಹಜ ಸಾವು ಎಂಬ ವರದಿ ಬಂದಿದೆ.
ಅರಣ್ಯದಲ್ಲಿ ಸಿಬ್ಬಂದಿ ಭಾನುವಾರ ಗಸ್ತು ತಿರುಗುವ ಸಂದರ್ಭದಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ಅಲ್ಲಿನವಲಯ ಅರಣ್ಯಾಧಿಕಾರಿ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.