ಚಾಮರಾಜನಗರ: ಕಾವೇರಿ ನದಿ ನೀರಿನ ಮಟ್ಟ ಹೆಚ್ಚಾಗಿದ್ದ ಕಾರಣಕ್ಕೆ ಕೊಳ್ಳೇಗಾಲ ತಾಲ್ಲೂಕಿನ ಭರಚುಕ್ಕಿ ಜಲಪಾತ, ವೆಸ್ಲಿ ಸೇತುವೆ ಹಾಗೂ ಹನೂರು ತಾಲ್ಲೂಕಿನ ಹೊಗೇನಕಲ್ ಜಲಪಾತಗಳಿಗೆ ಸಾರ್ವಜನಿಕರು, ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಹೊರಡಿಸಲಾಗಿದ್ದ ಆದೇಶವನ್ನು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಶುಕ್ರವಾರ ವಾಪಸ್ ಪಡೆದಿದ್ದಾರೆ.
‘ಕೇರಳ ರಾಜ್ಯದ ವಯನಾಡು ಪ್ರದೇಶ, ರಾಜ್ಯದ ಕೊಡಗು ಜಿಲ್ಲೆಯಲ್ಲಿ ಮಳೆ ಗಣನೀಯವಾಗಿ ಕಡಿಮೆಯಾಗಿರುವುದರಿಂದ ಕಾವೇರಿ ಹಾಗೂ ಕಬಿನಿ ನದಿಗಳಲ್ಲಿ ನೀರಿನ ಹರಿವು ಕಡಿಮೆಯಾಗಿದೆ. ಹೀಗಾಗಿ, ಈ ಹಿಂದೆ ವಿಧಿಸಲಾಗಿದ್ದ ನಿರ್ಬಂಧವನ್ನು ತಕ್ಷಣದಿಂದ ವಾಪಸ್ ಪಡೆಯಲಾಗಿದೆ’ ಎಂದು ಹೊಸ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಜಲಾಶಯಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹೊರ ಬಿಡುತ್ತಿದ್ದ ಕಾರಣಕ್ಕೆ, ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಧಿಕಾರಿ ಅವರು ಜಲಪಾತಗಳ ವೀಕ್ಷಣೆಗೆ ನಿರ್ಬಂಧ ವಿಧಿಸಿ ಇದೇ 13ರಂದು ಆದೇಶ ಹೊರಡಿಸಿದ್ದರು. ಆದೇಶದಿಂದಾಗಿ ಪ್ರವಾಸಿಗರು ನಿರಾಸೆ ಅನುಭವಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.