ಚಾಮರಾಜನಗರ: ಕರ್ನಾಟಕ ನಾಟಕ ಅಕಾಡೆಮಿಯ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ನಗರದ ರಂಗಭೂಮಿ ಕಲಾವಿದ ವೆಂಕಟರಮಣಸ್ವಾಮಿ ಅವರು ಆಯ್ಕೆಯಾಗಿದ್ದಾರೆ.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಬಡಾವಣೆಯ ನಿವಾಸಿಯಾಗಿರುವ ಅವರು 12ನೇ ವಯಸ್ಸಿನಿಂದಲೇ ರಂಗಭೂಮಿಯಲ್ಲಿ ತೊಡಗಿಕೊಂಡಿದ್ದಾರೆ. ವಂಶಪಾರಂಪರ್ಯವಾಗಿ ಬಂದಿರುವ ಕಲೆಯನ್ನು ಪೋಷಿಸಿಕೊಂಡು ಬಂದಿರುವ 70 ವರ್ಷ ವಯಸ್ಸಿನ ವೆಂಕಟರಮಣಸ್ವಾಮಿ ಅವರು ಪೌರಾಣಿಕ ನಾಟಕಗಳಲ್ಲಿ ನಾರದನ ಪಾತ್ರದ ಮೂಲಕ ಗುರುತಿಸಿಕೊಂಡವರು.
ಇದೇ 26ರಂದು ಧಾರವಾಡ ಜಿಲ್ಲೆಯ ಕಲಘಟಗಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಬಣ್ಣದ ಬಸವರಾಜಪ್ಪ ರಂಗಪ್ರಶಸ್ತಿ (2020–21) ಹಾಗೂ ಕರ್ನಾಟಕ ಕಲಾರತ್ನ ಪ್ರಶಸ್ತಿಗಳು (2016) ಈಗಾಗಲೇ ಅವರ ಮುಡಿಗೇರಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.