ADVERTISEMENT

ಕಾಶಿ, ಮಥುರಾದಲ್ಲಿ ಮಸೀದಿ ಧ್ವಂಸ ಮಾಡಿ ಮಂದಿರ ನಿರ್ಮಾಣ: ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2023, 15:53 IST
Last Updated 2 ಮಾರ್ಚ್ 2023, 15:53 IST
ಕೆ.ಎಸ್‌.ಈಶ್ವರಪ್ಪ
ಕೆ.ಎಸ್‌.ಈಶ್ವರಪ್ಪ   

ಗುಂಡ್ಲುಪೇಟೆ: ‘ನರೇಂದ್ರ ಮೋದಿ ಅವರು 2024ಕ್ಕೆ ಮತ್ತೆ ದೇಶದ ಪ್ರಧಾನಿಯಾಗುತ್ತಾರೆ. ಕಾಶಿ ಮತ್ತು ಮಥುರಾದಲ್ಲಿ ಮಸೀದಿಗಳು ಧ್ವಂಸ ಆಗಿ ಎರಡೂ ಕಡೆಗಳಲ್ಲಿ ದೇವಾಲಯ ನಿರ್ಮಾಣ ಆಗಿಯೇ ಆಗುತ್ತದೆ. ಇದರಲ್ಲಿ ಅನುಮಾನವೇ ಇಲ್ಲ’ ಎಂದು ಶಾಸಕ, ಬಿಜಪಿ ವಿಜಯ ಸಂಕಲ್ಪ ಯಾತ್ರೆಯ ಸಂಚಾಲಕ ಕೆ.ಎಸ್‌.ಈಶ್ವರಪ್ಪ ಗುರುವಾರ ಹೇಳಿದರು.

ಪಟ್ಟಣದ ನೆಹರು ಪಾರ್ಕ್‌ ಬಳಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಾಶಿಯಲ್ಲಿ ವಿಶ್ವನಾಥ ದೇವಾಲಯವನ್ನು ಹಾಗೂ ಮಥುರಾದಲ್ಲಿ ಕೃಷ್ಣನ ದೇವಾಲಯವನ್ನು ಕೆಡವಿ ಮಸೀದಿಗಳನ್ನು ನಿರ್ಮಿಸಿದ್ದಾರೆ. ಅವೆರಡೂ ಮಸೀದಿಗಳನ್ನು ಧ್ವಂಸವಾಗಿ ದೇವಾಲಯಗಳು ನಿರ್ಮಾಣವಾಗಲಿವೆ’ ಎಂದರು.

‘ಅಯೋಧ್ಯೆಯಲ್ಲಿ ಭವ್ಯ ಶ್ರೀರಾಮ ಮಂದಿರ ನಿರ್ಮಾಣವಾಗುತ್ತಿದೆ. ಉದ್ಘಾಟನೆಯಾದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ಸಿದ್ದರಾಮಯ್ಯ ಹೋಗಿ ಬರಲಿ. ಅವರ ಪಾಪವಾದರೂ ಕಡಿಮೆಯಾಗಲಿದೆ’ ಎಂದು ಹೇಳಿದರು.

ADVERTISEMENT

‘ಕಾಂಗ್ರೆಸ್‌ನಲ್ಲಿ ಒಬ್ಬರ ಕಾಲನ್ನು ಇನ್ನೊಬ್ಬರು ಎಳೆಯುತ್ತಾರೆ. ಮುಖ್ಯಮಂತ್ರಿ ಆಕಾಂಕ್ಷಿ ಎಂದು
ಪರಮೇಶ್ವರ್ ಅವರನ್ನು ಸಿದ್ದರಾಮಯ್ಯ ಸೋಲಿಸಿದರು. ಮೈಸೂರಿನ ಚಾಮುಂಡೇಶ್ವರಿಯಲ್ಲಿ ಪರಮೇಶ್ವರ್ ಶಿಷ್ಯರು, ಅಭಿಮಾನಿಗಳು ಬಂದು ಸಿದ್ದರಾಮಯ್ಯನವರನ್ನು ಸೋಲಿಸಿದರು. ಇಲ್ಲ ಎಂದು ಪರಮೇಶ್ವರ್ ಹಾಗೂ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಆಣೆ ಮಾಡಿ ಹೇಳಲಿ’ ಎಂದು ಸವಾಲು ಹಾಕಿದರು.

‘ಸಿದ್ದರಾಮಯ್ಯ ಮತ್ತು ಜಮೀರ್ ಅಹಮದ್ ಇಬ್ಬರೂ ಜಿನ್ನಾ ಸಂತತಿಯವರು. ಸಿದ್ದರಾಮಯ್ಯ ಅವರಿಗೆ ಇನ್ನೂ ಕ್ಷೇತ್ರ ನಿಗದಿಯಾಗಿಲ್ಲ. ಕೋಲಾರಕ್ಕೆ ಹೋದರೆ ಬ್ರಹ್ಮ ಬಂದರೂ ಗೆಲ್ಲುವುದಿಲ್ಲ. ಕೋಲಾರದಲ್ಲಿ ಎಲ್ಲ ಸಮುದಾಯದವರು ಸಿದ್ದರಾಮಯ್ಯ ಅವರನ್ನು ಸೋಲಿಸಲು ಕಾಯುತ್ತಿದ್ದಾರೆ’ ಎಂದು ಈಶ್ವರಪ್ಪ ಟೀಕಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.