ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದ ಪರಿಶಿಷ್ಟ ಜಾತಿ ಕಾಲೊನಿಯ ಬಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಒಣಗಿದ ಮರ ಉರುಳಿ ಬೀಳುವ ಸ್ಥಿತಿಯಲ್ಲಿದ್ದು. ಪೋಷಕರ ಆತಂಕಕ್ಕೆ ಕಾರಣವಾಗಿದೆ.
‘ಶಾಲೆಯಲ್ಲಿ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಶಾಲೆಯ ಅಂಗಳದಲ್ಲಿ ಇರುವ ಮರದ ಸುತ್ತ ವಿದ್ಯಾರ್ಥಿಗಳು ಪ್ರಾರ್ಥನೆ ಮತ್ತು ಆಟೋಟಗಳಲ್ಲಿ ತೊಡಗುತ್ತಾರೆ. ಮಳೆ, ಗಾಳಿ ಬೀಸಿದಾಗ ಮರ ಬೀಳುವ ಆತಂಕ ಇದೆ. ಮರ ತೆರವು ಗೊಳಿಸುವಂತೆ ಒತ್ತಾಯಿಸಿದರೂ ಯಾರು ಆಸಕ್ತಿ ವಹಿಸುತ್ತಿಲ್ಲ. ಇದರಿಂದ ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯವಾಗುತ್ತಿದೆ’ ಎಂದು ಪೋಷಕರು ದೂರಿದರು.
ಮರ ತೆರವುಗೊಳಿಸುವಂತೆ ಮುಖ್ಯ ಶಿಕ್ಷಕರು ಶಾಲೆಯ ಆಡಳಿತ ಮಂಡಳಿ, ಗ್ರಾಮ ಪಂಚಾಯಿತಿ ಸದಸ್ಯರಿಗೂ ತಿಳಿಸಿದ್ದಾರೆ.ಪಂಚಾಯತಿ ಅಭಿವೃದ್ಧಿ ಅಧಿಕಾರಿ ವಿಷಯ ಗೊತ್ತಿದ್ದರೂ ಸ್ಪಂದಿಸಿಲ್ಲ ಎಂದು ಪೋಷಕರಾದ ಮಾದಯ್ಯ ಮತ್ತು ನಂಜುಂಡ ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.