ಯಳಂದೂರು: ಪಟ್ಟಣದ ಜೆಎಸ್ಎಸ್ ಮಹಿಳಾ ಕಾಲೇಜಿನ ಪ್ರೌಢಶಾಲಾ ವಿಭಾಗದ ಕಚೇರಿಯ ಕಿಟಕಿ ಸರಳನ್ನು ಬುಧವಾರ ತಡರಾತ್ರಿ ಮುರಿದ ಕಳ್ಳರು ಹಣ ಮತ್ತು ಎಲೆಕ್ಟ್ರಾನಿಕ್ ವಸ್ತುಗಳನ್ನು ದೋಚಿದ್ದಾರೆ.
ಪ್ರವಾಸಕ್ಕೆ ತೆರಳಲು ವಿದ್ಯಾರ್ಥಿಗಳಿಂದ ಸಂಗ್ರಹಿಸಿದ್ದ ₹37,800 ನಗದು ಹಾಗೂ ಸಿಸಿಟಿವಿಗೆ ಸಂಪರ್ಕ ಕಲ್ಪಿಸುವ 8 ಸಾವಿರ ಮೌಲ್ಯದ ಡಿವಿಆರ್ ಕದ್ದಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಎಸ್ಡಿವಿಎಸ್ ಶಾಲೆಯ ಒಳ ಪ್ರವೇಶಿಸಿ, 1 ಡಿವಿಆರ್ ಅಪಹರಿಸಿದ್ದಾರೆ.
ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಕೃತ್ಯ ಸ್ಥಳದ ಅಪರಾಧ ವೀಕ್ಷಣ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಪಟ್ಟಣ ಠಾಣೆಯಲ್ಲಿ ಗುರುವಾರ ಎರಡು ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.