ADVERTISEMENT

ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಕರೆತನ್ನಿ: ಎಸ್.ಆನಂದ್ ಮನವಿ

​ಪ್ರಜಾವಾಣಿ ವಾರ್ತೆ
Published 9 ಜೂನ್ 2024, 14:13 IST
Last Updated 9 ಜೂನ್ 2024, 14:13 IST
ಚಿಂತಾಮಣಿ ತಾಲ್ಲೂಕಿನ ಮುನುಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಲಾಯಿತು
ಚಿಂತಾಮಣಿ ತಾಲ್ಲೂಕಿನ ಮುನುಗನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನೋಟ್ ಪುಸ್ತಕ ವಿತರಿಸಲಾಯಿತು   

ಚಿಂತಾಮಣಿ: ಅರ್ಧದಲ್ಲಿ ಶಾಲೆ ಬಿಟ್ಟ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಿ ಮರಳಿ ಶಾಲೆಗೆ ಕರೆತರಲು ಶ್ರಮಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಮನವಿ ಮಾಡಿದರು.

ತಾಲ್ಲೂಕಿನ ಟಿ.ಎನ್.ಆರ್ ಸಂಸ್ಥೆಯ ಮುನಗನಹಳ್ಳಿ ಗ್ರಾಮದ ದಿವಂಗತ ಟಿ.ಎನ್.ರಾಮಪ್ಪ ನೆನಪಿನಲ್ಲಿ ಶನಿವಾರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಮಕ್ಕಳಿಗೆ ಉಚಿತ ಪುಸ್ತಕ, ಲೇಖನಿ ಸಾಮಾಗ್ರಿ ವಿತರಿಸಿ ಮಾತನಾಡಿದರು.

ತಾಲ್ಲೂಕಿನ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಮತ್ತು ಕೆಲವು ಆಯ್ದ ಮಾದರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮಾಡಲಾಗಿದೆ. ಹಂತ ಹಂತವಾಗಿ ಸರ್ಕಾರಿ ಶಾಲೆಗಳನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಟಿಎನ್‌ಆರ್ ಸಿಲ್ಕ್ಸ್ ಅಂಡ್ ಸ್ಯಾರೀಸ್ ಸಂಸ್ಥೆಯ ಶ್ರೀನಿವಾಸ್ ಮಾತನಾಡಿದರು. ಮುಖಂಡ ಟಿ.ನಾರೆಪ್ಪ, ಶ್ರೀರಾಮರೆಡ್ಡಿ, ರಮೇಶ್, ವೆಂಕಟರೆಡ್ಡಿ, ನಾರಾಯಣರೆಡ್ಡಿ, ಮುನಿನಾರಾಯಣಪ್ಪ, ಕೃಷ್ಣಾರೆಡ್ಡಿ, ಶ್ರೀನಿವಾಸ, ಕೆಂಪರೆಡ್ಡಿ, ಜಯದೇವ್, ಲಕ್ಷ್ಮಣ ರೆಡ್ಡಿ, ಮಂಜುಳ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.