ಚಿಕ್ಕಬಳ್ಳಾಪುರ: ಯಾವುದೇ ಸರಕು ಮತ್ತು ಸೇವೆಗಳನ್ನು ಗ್ರಾಹಕರು ಖರಿದಿಸಿದಾಗ ಮಾರಾಟಗಾರರಿಂದ ಕಡ್ಡಾಯವಾಗಿ ನೋಂದಾಯಿತ ರಶೀದಿ ಕೇಳಿ ಪಡೆಯಬೇಕು ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶ ಎಸ್. ರಾಜಶೇಖರ್ ಅವರು ಗ್ರಾಹಕರಿಗೆ ಸಲಹೆನೀಡಿದರು.
ನಗರದ ಸೇಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ನಡೆದ‘ರಾಷ್ಟ್ರೀಯ ಗ್ರಾಹಕರ ಹಕ್ಕು’ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಗ್ರಾಹಕವ್ಯಾಜ್ಯಗಳ ಪರಿಹಾರ ಆಯೋಗ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ, ಕಾನೂನು ಮಾಪನ ಇಲಾಖೆ,ವಾರ್ತಾ ಇಲಾಖೆ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಿತು.
‘ಯಾವುದೇ ಸರಕು ಸೇವೆ ಖರೀದಿಸುವಾಗ ಗ್ರಾಹಕರು ಗುಣಮಟ್ಟ ಮತ್ತು ಪರಿಮಾಣಗಳ ಮಾಹಿತಿ ಪಡೆಯಬೇಕು. ನಾವು ನೀಡುತ್ತಿರುವ ಹಣದ ಮೌಲ್ಯಕ್ಕೆ ಸೇವೆಗಳುಸಮರ್ಪಕವಾಗಿದೆಯೇ ಎಂಬುದನ್ನು ಪರಿಶೀಲಿಸಿ ಖರೀದಿಸಬೇಕು’ ಎಂದು ಕಿವಿಮಾತು ಹೇಳಿದರು.
ವ್ಯಾಪಾರಿಗಳಿಂದ ಸೇವೆಯಲ್ಲಿ ಮತ್ತು ಸರಕಿನಲ್ಲಿ ಅಸಮರ್ಪಕ ಮತ್ತು ದೋಷವಾಗಿದ್ದರೆ ಅಂತಹ ವ್ಯಕ್ತಿ ಮತ್ತು ಸಂಸ್ಥೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಪರಿಹಾರ ಪಡೆಯುವ ಹಕ್ಕುಗ್ರಾಹಕರಿಗೆ ಇದೆ. ಸರ್ಕಾರ 1986ರಲ್ಲಿ ಗ್ರಾಹಕರ ಹಿತ ರಕ್ಷಣೆಗಾಗಿ ಗ್ರಾಹಕರ ಹಿತರಕ್ಷಣಾ ಕಾಯ್ದೆ ಜಾರಿಗೊಳಿಸಿದೆ. ಈ ಹಿಂದೆ ವಸ್ತುಗಳ ಖರೀದಿಯಲ್ಲಿ ಆಗುವ ಮೋಸಕ್ಕೆ ಮಾತ್ರ ಗ್ರಾಹಕರು ಪರಿಹಾರ ಪಡೆಯಬಹುದಾಗಿತ್ತು. ಪ್ರಸ್ತುತ ಪರಿಹಾರವನ್ನು ಸೇವೆಗಳಿಗೂ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್ ನಾಗೇಶ್ ಮಾತನಾಡಿ,ಪೂರ್ಣ ಮಾಹಿತಿ ಪಡೆದ ನಂತರವೇ ಖರೀದಿಗೆ ಮುಂದಾಗ
ಬೇಕು.ನ್ಯಾಯಸಮ್ಮತವಲ್ಲದ ವ್ಯಾಪಾರಪದ್ಧತಿಗಳ ವಿರುದ್ಧ ಸುರಕ್ಷೆ ಪಡೆಯಲು ಕಾನೂನಿನಲ್ಲಿ ಗ್ರಾಹಕರಿಗೆ ಅವಕಾಶವಿದೆ ಎಂದರು.
ಗ್ರಾಹಕ ಹಕ್ಕುಗಳ ಬಗ್ಗೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಅಧ್ಯಕ್ಷ ಸಯ್ಯದ್ ಅನ್ವರ್ ಕಲೀಮ್ ಉಪನ್ಯಾಸ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಲಕ್ಷ್ಮಿಕಾಂತ್ ಜೆ. ಮಿಸ್ಕಿನ್, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಜಂಟಿ ನಿರ್ದೇಶಕಿ ಪಿ. ಸವಿತಾ,ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಇಲಾಖೆಯ ಜಿಲ್ಲಾ ಅಂಕಿತ
ಅಧಿಕಾರಿ ಡಾ. ಸುನಿಲ್, ಕಾನೂನು ಮಾಪನ ಇಲಾಖೆ ಸಹಾಯಕ ನಿಯಂತ್ರಕರಾದ ಎಸ್. ಮಾಲಾಕಿರಣ್, ಕೆಎಫ್‌ಸಿಎಸ್‌ಸಿಜಿಲ್ಲಾ ವ್ಯವಸ್ಥಾಪಕ ಎಸ್.ಸಿ. ಚೌಡೇಗೌಡ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಅಧ್ಯಕ್ಷ ಎಸ್. ಕೃಷ್ಣಯ್ಯ ಶೆಟ್ಟಿ, ಸೇಂಟ್ ಜೋಸೆಫ್ ಮಹಿಳಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದಭಾರತಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್. ಆನಂದ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕ ಎಂ. ಜುಂಜಣ್ಣ ಇದ್ದರು.
‘ಹಕ್ಕುಗಳ ಬಗ್ಗೆ ಜಾಗೃತಿರಾಗಿ’
ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಮಾತನಾಡಿ, ಪ್ರತಿಯೊಬ್ಬರೂಒಂದಲ್ಲ ಒಂದು ರೀತಿಯಲ್ಲಿ ಗ್ರಾಹಕರೇ ಆಗಿದ್ದೇವೆ. ಪ್ರತಿಯೊಬ್ಬ ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತಿಹೊಂದಬೇಕು.
₹1 ಲಕ್ಷದಿಂದ ₹20 ಲಕ್ಷದವರೆಗಿನ ವಸ್ತುಗಳ ಖರೀದಿಯಲ್ಲಿ ಮೋಸಕ್ಕೆ ಒಳಗಾದವರುಜಿಲ್ಲಾ ಗ್ರಾಹಕರ ವೇದಿಕೆಗೆ, ₹20 ಲಕ್ಷದಿಂದ ₹1 ಕೋಟಿವರೆಗಿನ ಮೋಸಕ್ಕೆಒಳಗಾದವರು ರಾಜ್ಯ ಗ್ರಾಹಕರ ವೇದಿಕೆಗೆ ಮತ್ತು ₹1 ಕೋಟಿಗಿಂತ ಹೆಚ್ಚಿನ ಮೌಲ್ಯದ ವಸ್ತುಗಳಖರೀದಿಯಲ್ಲಿ ಮೋಸಕ್ಕೆ ಒಳಗಾದವರು ರಾಷ್ಟ್ರೀಯ ಗ್ರಾಹಕರ ಆಯೋಗಗಳಿಗೆ ದೂರು ಸಲ್ಲಿಸಬಹುದು ಎಂದುಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.