ADVERTISEMENT

ಚಿಕ್ಕಬಳ್ಳಾಪುರ: ಚುನಾವಣೆ,ಮತದಾನ ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿ; ಸಿಇಒ ಪ್ರಕಾಶ್

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2024, 15:35 IST
Last Updated 8 ನವೆಂಬರ್ 2024, 15:35 IST
ಚಿಕ್ಕಬಳ್ಳಾಪುರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಜಿ.ಪಂ ಸಿಇಒ ‍ಪ್ರಕಾಶ್ ನಿಟ್ಟಾಲಿ ಮಾತನಾಡಿದರು 
ಚಿಕ್ಕಬಳ್ಳಾಪುರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ ಜಿ.ಪಂ ಸಿಇಒ ‍ಪ್ರಕಾಶ್ ನಿಟ್ಟಾಲಿ ಮಾತನಾಡಿದರು    

ಚಿಕ್ಕಬಳ್ಳಾಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ನೂತನ ಮತ್ತು ಯುವ ಮತದಾರರಲ್ಲಿ ಚುನಾವಣೆ ಮತ್ತು ಮತದಾನ ಪ್ರಕ್ರಿಯೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2024-25 ನೇ ಸಾಲಿನ ರಾಷ್ಟ್ರೀಯ ಮತದಾರರ ದಿನಾಚರಣೆಯ ಪೂರ್ವಭಾವಿ ಸಭೆಯಲ್ಲಿ  ಮಾತನಾಡಿದರು.

ಪ್ರತಿ ವರ್ಷ ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ ಆಚರಿಸಲಾಗುತ್ತದೆ. ಈ ದಿನ ಹೊಸ, ಯುವ ಮತದಾರರಿಗೆ ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿ ನೀಡಿ ಮತದಾರರ ಸಾಕ್ಷರತೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ ಎಂದರು.

ADVERTISEMENT

ಈ ಬಾರಿ ಜಿಲ್ಲೆಯ ಎಲ್ಲ ಶಾಲಾ, ಕಾಲೇಜುಗಳು https://ceo.karnataka.gov.in/ ವೆಬ್‌ನಲ್ಲಿ ನೋಂದಣಿ ಆಗಬೇಕು. ನ.11 ರಿಂದ ಚುನಾವಣೆ ಜಾಗೃತಿ ಮೂಡಿಸುವ ಸ್ಪರ್ಧೆ ಆಯೋಜಿಸಬೇಕು. ನ.22 ರೊಳಗೆ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಸ್ಪರ್ಧೆಗಳನ್ನು ಮುಗಿಸಿದ ನಂತರ ಎಲ್ಲಾ ಚಟುವಟಿಕೆಗಳನ್ನು , ಸ್ಪರ್ಧೆಯ ಪ್ರಕ್ರಿಯೆಯನ್ನು consveep@gmail.com ಕಳುಹಿಸಬೇಕು ಎಂದು ಸೂಚಿಸಿದರು.

ಪ್ರತಿ ವರ್ಷದಂತೆ ಈ ವರ್ಷವೂ ಸಹ ಶಾಲಾ, ಕಾಲೇಜುಗಳಲ್ಲಿ ತಾಲ್ಲೂಕು, ಜಿಲ್ಲಾ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ, ಭಿತ್ತಿಪತ್ರ, ರಸ ಪ್ರಶ್ನೆ, ಮತದಾರರ ಜಾಗೃತಿ ರೀಲ್ಸ್ ಚಟುವಟಿಕೆಗಳನ್ನು ಆಯೋಜಿಸಬೇಕು. ವಿಜೇತರಿಗೆ ಪ್ರಶಸ್ತಿ ಪತ್ರ ಮತ್ತು ನಗದು ಬಹುಮಾನ ನೀಡಬೇಕು ಎಂದರು.

ಸರ್ಕಾರಿ ಶಾಲಾ ಮತ್ತು ಕಾಲೇಜುಗಳ ಪ್ರಾಂಶುಪಾಲರು, ಬೋಧಕರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.