ADVERTISEMENT

ಬಾಗೇಪಲ್ಲಿ | ಗ್ರಾನೈಟ್ ದಿಮ್ಮಿಗಳ ಸಾಗಿಸಿದ್ದ 3 ಲಾರಿ ವಶ

ವಶ

​ಪ್ರಜಾವಾಣಿ ವಾರ್ತೆ
Published 10 ಜೂನ್ 2024, 14:34 IST
Last Updated 10 ಜೂನ್ 2024, 14:34 IST
ಬಾಗೇಪಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಗ್ರಾನೈಟ್ ದಿಮ್ಮಿಗಳು
ಬಾಗೇಪಲ್ಲಿ ಪೊಲೀಸರು ವಶಪಡಿಸಿಕೊಂಡಿರುವ ಗ್ರಾನೈಟ್ ದಿಮ್ಮಿಗಳು   

ಬಾಗೇಪಲ್ಲಿ: ಅಧಿಕ ಭಾರದ ಗ್ರಾನೈಟ್ ದಿಮ್ಮಿಗಳನ್ನು ನಿಯಮ ಬಾಹಿರವಾಗಿ ಸಾಗಿಸುತ್ತಿದ್ದ ಮೂರು ಲಾರಿಗಳನ್ನು ಶನಿವಾರ ರಾತ್ರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ಹೊರವಲಯದ ಗೂಳೂರು ಕಡೆಯಿಂದ ಪಟ್ಟಣದ ಮುಖ್ಯರಸ್ತೆಗೆ ಸಂಚರಿಸುತ್ತಿದ್ದ ಮೂರು ಲಾರಿಗಳಲ್ಲಿ ಅಕ್ರಮವಾಗಿ ಅಧಿಕ ಭಾರದ ಗ್ರಾನೈಟ್ ದಿಮ್ಮಿಗಳನ್ನು ಸಾಗಿಸಲಾಗುತ್ತಿತ್ತು.

ಪ್ರಭಾರ ಸರ್ಕಲ್ ಇನ್‌ಸ್ಪೆಕ್ಟರ್ ನಯಾಜ್ ಬೇಗ್ ನೇತೃತ್ವದಲ್ಲಿ ದಾಳಿ ನಡೆಸಿ ವಶಕ್ಕೆ ಪಡೆಯಲಾಗಿದೆ.

ADVERTISEMENT

‘ಸಾರ್ವಜನಿಕರಿಂದ 3 ಲಾರಿಗಳಲ್ಲಿ ಅಕ್ರಮವಾಗಿ ಗ್ರಾನೈಟ್ ಸಾಗಿಸುವ ಮಾಹಿತಿ ಸಿಕ್ಕಿತು. ಸಾರಿಗೆ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಲಾಗುವುದು‘ ನಯಾಜ್‍ಬೇಗ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.