ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ.ಕೆ.ಸುಧಾಕರ್ ಗೆಲ್ಲುವ ಮೂಲಕ ಬಿಜೆಪಿ ಗೆಲುವಿನ ನಗೆ ಬೀರಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಸುಧಾಕರ್ ಈಗ ಪುಟಿದು ನಿಂತಿದ್ದಾರೆ. ಆ ಮೂಲಕ ಬಿಜೆಪಿಯ ತೆಕ್ಕೆಯಲ್ಲಿಯೇ ಕ್ಷೇತ್ರವನ್ನು ಉಳಿಸಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಬಿ.ಎನ್.ಬಚ್ಚೇಗೌಡ ಅವರು ಗೆಲ್ಲುವ ಮೂಲಕ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದಿತ್ತು. ಬಚ್ಚೇಗೌಡರ ರಾಜಕೀಯ ನಿವೃತ್ತಿಯ ಕಾರಣದಿಂದ ಡಾ.ಕೆ.ಸುಧಾಕರ್ ಬಿಜೆಪಿಯಿಂದ ಕಣಕ್ಕೆ ಇಳಿದರು.
ಡಾ.ಕೆ.ಸುಧಾಕರ್ 8,22,619 ಮತಗಳನ್ನು ಕಾಂಗ್ರೆಸ್‌ನ ಎಂ.ಎಸ್. ರಕ್ಷಾ ರಾಮಯ್ಯ 6,59,159 ಮತಗಳನ್ನು ಪಡೆದಿದ್ದಾರೆ.1,63,460 ಮತಗಳ ಅಂತರದಿಂದ ಸುಧಾಕರ್ ಗೆಲುವು ಸಾಧಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.