ADVERTISEMENT

ಚಿಕ್ಕಬಳ್ಳಾಪುರ | ಒಳಮೀಸಲಾತಿ ವರ್ಗೀಕರಣಕ್ಕಾಗಿ ಒತ್ತಾಯ: ಮೀಸಲಾತಿ ಹೋರಾಟ ಸಮಿತಿ

16ಕ್ಕೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 13:25 IST
Last Updated 10 ಅಕ್ಟೋಬರ್ 2024, 13:25 IST
ಚಿಂತಾಮಣಿಯಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ
ಚಿಂತಾಮಣಿಯಲ್ಲಿ ಮಾದಿಗ ದಂಡೋರ ಮಾದಿಗ ಮೀಸಲಾತಿ ಹೋರಾಟ ಸಮಿತಿ ಗುರುವಾರ ಹಮ್ಮಿಕೊಂಡಿದ್ದ ಪತ್ರಿಕಾಗೋಷ್ಠಿ   

ಚಿಂತಾಮಣಿ: ‘ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಗೆ ಹಿಂದೆ-ಮುಂದೆ ನೋಡುತ್ತಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಅಕ್ಟೋಬರ್ 16 ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು’ ಎಂದು ಮಾದಿಗ ದಂಡೋರ ಮೀಸಲಾತಿ ಹೋರಾಟ ಜನಜಾಗೃತಿ ಸಮಿತಿ ಎಚ್ಚರಿಸಿದೆ.

ಮಾದಿಗ ದಂಡೋರ ಮೀಸಲಾತಿ ಜನಜಾಗೃತಿ ಹೋರಾಟ ಸಮಿತಿ ಗುರುವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮುಖಂಡ ವಿ.ಅಮರ್ ಖಂಡಿಸಿದರು.

ಪರಿಶಿಷ್ಟಜಾತಿ, ಪಂಗಡಗಳಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ಹೋರಾಟ ಸಮಿತಿ ದಶಕಗಳಿಂದ ಹೋರಾಟ ನಡೆಸುತ್ತಿದೆ. ಒಳ ಮೀಸಲಾತಿ ವರ್ಗೀಕರಣಕ್ಕೆ ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ. ರಾಜ್ಯಗಳ ವಿವೇಚನಾಧಿಕಾರ ಬಳಸಿ ಜಾರಿಗೊಳಿಸಬಹುದು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ ಎಂದರು.

ADVERTISEMENT

‘ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಗಳನ್ನು ಕೋರ್ಟ್ ವಜಾ ಮಾಡಿದೆ. ಕೆಲವು ರಾಜ್ಯಗಳು ಒಳಮೀಸಲಾತಿ ಜಾರಿಗೆ ತಯಾರಿ ಮಾಡಿಕೊಳ್ಳುತ್ತಿವೆ. ಕರ್ನಾಟಕ ಸರ್ಕಾರ ಮಾತ್ರ ಮೀನಮೇಷ ಎಣಿಸುತ್ತಿದೆ’ ಎಂದು ಆರೋಪಿಸಿದರು.

‘ರಾಜ್ಯ ಸರ್ಕಾರದ ಉದಾಸೀನತೆ ಹಾಗೂ ನಿರ್ಲಕ್ಷ್ಯದ ನಡೆ ಸರಿಯಲ್ಲ. ರಾಜ್ಯ ಸರ್ಕಾರ ಮಾದಿಗ ಸಮುದಾಯದ ವಿರೋಧವನ್ನು ಎದುರಿಸಬೇಕಾಗುತ್ತದೆ. ಮುಖ್ಯಮಂತ್ರಿ ಕೂಡಲೇ ಒಳಮೀಸಲಾತಿ ಕಡೆ ಗಮನಹರಿಸಿ ಕ್ರಮಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ಎಂ.ವಿ.ರಾಮಪ್ಪ, ಗಂಗಾಧರ್, ಕೃಷ್ಣಪ್ಪ, ಎಂ.ರಂಗಪ್ಪ, ಎಂ.ಆರ್.ನಾರಾಯಣಸ್ವಾಮಿ, ನರಸಿಂಹಪ್ಪ, ಧನಮ್ಮ, ಪಿ.ವಿ.ಮಂಜುನಾಥ್, ಆಂಜಿನಪ್ಪ, ಸೋಮಶೇಖರ್, ಸುರೇಶ್, ಎಂ.ಎನ್.ನಾರಾಯಣಸ್ವಾಮಿ, ಎಲ್.ಬಿ.ಗಂಗಾಧರ್, ಎಸ್.ನಾಗರಾಜ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.