ADVERTISEMENT

ಕೋವಿಶೀಲ್ಡ್: ಸಿದ್ದರಾಮಯ್ಯ ಲಾ ಕಾಲೇಜ್ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರ ವಿವಾದಾತ್ಮಕ ಪ್ರಕಟಣೆ

​ಪ್ರಜಾವಾಣಿ ವಾರ್ತೆ
Published 3 ಮೇ 2024, 6:50 IST
Last Updated 3 ಮೇ 2024, 6:50 IST
ಕೋವಿಶೀಲ್ಡ್
ಕೋವಿಶೀಲ್ಡ್   

ಚಿಕ್ಕಬಳ್ಳಾಪುರ: ಕೋವಿಶೀಲ್ಡ್ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್‌ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದು ವರದಿ ಆಗುತ್ತಿದೆ. ಆದ ಕಾರಣ ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿ ಪ್ರಕಾರ ವಿದ್ಯಾರ್ಥಿಗಳು, ಪೋಷಕರು ಪ್ರಿಡ್ಜ್ ನೀರು, ತಂಪು ಪಾನೀಯಗಳು ಕುಡಿಯಬಾರದು. ಐಸ್ ಕ್ರೀಮ್ ಸೇವಿಸಬಾರದು ಎಂದು ಚಿಕ್ಕಬಳ್ಳಾಪುರ ನಗರದ ಸಿದ್ದರಾಮಯ್ಯ ಕಾನೂನು ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದು ಚರ್ಚೆಗೆ ಕಾರಣವಾಗಿದೆ.

ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ತಮ್ಮ ಪೋಷಕರಿಗೆ ಮತ್ತು ಇತರರಿಗೂ ತಿಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ್ದಾರೆ.

ADVERTISEMENT

ಇನ್ನೂ ಎರಡು ತಿಂಗಳು ಬೇಸಿಗೆ ಹೆಚ್ಚಾಗುತ್ತದೆ. ಆ ಕಾರಣದಿಂದ ಎಲ್ಲರೂ ತಲೆಗೆ ಟೋಪಿ ಅಥವಾ ಬಟ್ಟೆ ಧರಿಸಬೇಕು. ಛತ್ರಿ ಹಿಡಿದು ಓಡಾಡಬೇಕು.

ಈ ವಿಷಯವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಪಾಲಿಸುತ್ತ ತಮ್ಮ ಪೋಷಕರು ಮತ್ತು ಇತರರಿಗೆ ತಿಳಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತರಗತಿಗಳು ಆರಂಭವಾಗಿವೆ. ವಿದ್ಯಾರ್ಥಿಗಳು ತಣ್ಣನೆಯ ನೀರು ಕುಡಿಯುತ್ತಿದ್ದರು. ಐಸ್ ಕ್ರೀಂ ಸೇವಿಸುತ್ತಿದ್ದರು. ಬಿಸಿಲ ಕಾರಣ ಲೋ ಬಿಪಿ ಆದ ನಿದರ್ಶನಗಳು ಇವೆ. ಈ ವಿಚಾರದಲ್ಲಿ ಜಾಹೀರಾತು ಸಹ ನೋಡಿದ್ದೆವು‌. ವಿದ್ಯಾರ್ಥಿಗಳು ಮತ್ತು ನಮ್ಮ ಸಿಬ್ಬಂದಿ ಹಿತದೃಷ್ಟಿಯಿಂದ ಈ ತಿಳಿವಳಿಕೆಯ ಪ್ರಕಟಣೆ ಹೊರಡಿಸಲಾಗಿದೆ. ಇದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ ಎಂದು ಕಾಲೇಜಿನ ಆಡಳಿತಾಧಿಕಾರಿ

ಶಿವಜ್ಯೋತಿ ಪ್ರಜಾವಾಣೆಗೆ ತಿಳಿಸಿದರು.

ತರಾಟೆಗೆ

ಈ ಪ್ರಕಟಣೆಯ ನಂತರ ಕೆಲವರು ಮಾಧ್ಯಮಗಳ ಹೆಸರಿನಲ್ಲಿ ಪ್ರಾಂಶುಪಾಲರಿಗೆ ಕರೆ ಮಾಡಿ ಮತ್ತು ಕಾಲೇಜು ಬಳಿ ಹೋಗಿ ತರಾಟೆ ಸಹ ತೆಗೆದುಕೊಂಡಿದ್ದಾರೆ. ಇದರಿಂದ ಸಿಬ್ಬಂದಿ ಹೆದರಿದ್ದಾರೆ. ನಾವು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮಾತ್ರ ಈ ಕ್ರಮವಹಿಸಿದ್ದೇವೆ ಎಂದು ಕಾಲೇಜು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.