ADVERTISEMENT

ವೆಂಕಟಾಪುರದಲ್ಲಿ ಕ್ಯಾನ್ಸರ್ ತಪಾಸಣೆ ಶಿಬಿರ

​ಪ್ರಜಾವಾಣಿ ವಾರ್ತೆ
Published 9 ಜುಲೈ 2024, 16:10 IST
Last Updated 9 ಜುಲೈ 2024, 16:10 IST
ಸಾದಲಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಿತು 
ಸಾದಲಿ ಹೋಬಳಿಯ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಆವರಣದಲ್ಲಿ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಯಿತು    

ಸಾದಲಿ: ಮುಂದಿನ ದಿನಗಳಲ್ಲಿ ಕ್ಯಾನ್ಸರ್ ಸೇರಿದಂತೆ ಯಾವುದೇ ಕಾಯಿಲೆಯಿಂದ ಬಳಲುತ್ತಿರುವ ಮಹಿಳೆಯರು ತೊಂದರೆಗಳನ್ನು ಅನುಭವಿಸಬಾರದು. ಕ್ಯಾನ್ಸರ್ ರೋಗವನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿದಲ್ಲಿ ಗುಣಪಡಿಸಬಹುದು ಎಂದು ಗರ್ಭಕೋಶ ಕ್ಯಾನ್ಸರ್ ವೈದ್ಯೆ ಡಾ.ಶ್ರೀವಲ್ಲಿ ತಿಳಿಸಿದರು.

ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ, ಮುದ್ದೇನಹಳ್ಳಿ ಸತ್ಯಸಾಯಿ ಆಸ್ಪತ್ರೆ, ಜಿಲ್ಲಾ ಆರೋಗ್ಯ ಇಲಾಖೆ ಆಶ್ರಯದಲ್ಲಿ ಟಿ.ವೆಂಕಟಾಪುರ ಗ್ರಾಮದಲ್ಲಿ ಮಂಗಳವಾರ ನಡೆದ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದ ಮಹಿಳೆಯರು ಯಾವುದೇ ರೋಗ ಬಂದಾಗ ನಿರ್ಲಕ್ಷ್ಯ ತೋರಬಾರದು. ರೋಗಗಳನ್ನು ಪತ್ತೆ ಹಚ್ಚಿ ರೋಗಕ್ಕೆ ತಕ್ಕಂತಹ ಚಿಕಿತ್ಸೆ ನೀಡಿ ಅಪಾಯದಿಂದ ಪಾರು ಮಾಡಬಹುದು. ಮಹಿಳೆಯರು ಯಾವುದೇ ಕಾಯಿಲೆ ಇದ್ದರೂ ವೈದ್ಯರ ಬಳಿ ಬಳಿ ಹೇಳಿಕೊಂಡಾಗ ಯಾವ ರೋಗ ಇದ್ದರೂ ಪತ್ತೆ ಹಚ್ಚಬಹುದು ಎಂದು ಹೇಳಿದರು.

ADVERTISEMENT

ಶಿಬಿರದಲ್ಲಿ 70ಕ್ಕೂ ಹೆಚ್ಚು ಮಂದಿಯನ್ನು ತಪಾಸಣೆ ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದವರು ಮುದ್ದೇನಹಳಿ ಸತ್ಯ ಸಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು ಎಂದರು. 

ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಹೆಚ್ಚಾಗಿ ಬಡವರು, ಕೂಲಿ ಕಾರ್ಮಿಕರು ಇದ್ದಾರೆ. ಗ್ರಾಮಗಳಲ್ಲಿ ಉಚಿತ ಆರೋಗ್ಯ ಶಿಬಿರ ಆಯೋಜಿಸಿದಾಗ ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಸೂಚನೆಗಳನ್ನು ಪಡೆಯಬೇಕು. ಆರೋಗ್ಯದ ಕಡೆ ಗಮನ ಕೊಡಬೇಕು ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸಪ್ಪ ಹೇಳಿದರು.

ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಸ್ ವೆಂಕಟಶಾಮಿ, ಮಾಜಿ ಉಪಾಧ್ಯಕ್ಷ ಅಶ್ವತ್ಥರೆಡ್ಡಿ, ಎಸ್.ಡಿ.ಎಂ.ಸಿ. ಅಧ್ಯಕ್ಷ ಈಶ್ವರಪ್ಪ, ಶಿಕ್ಷಕ ವೆಂಕಟರೆಡ್ಡಿ, ವೈದ್ಯರಾದ ಡಾ. ನಮ್ರತಾ, ಡಾ. ಶಿಲ್ಪಾ,  ಕವಿತಾ, ಆಶಾ ಕಾರ್ಯಕರ್ತೆಯರಾದ ಪಾರ್ವತಮ್ಮ, ಶೈಲಜಾ‌, ಅರುಣ, ಗುಣಲಕ್ಷ್ಮಿ ಇತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.