ADVERTISEMENT

ಚೇಳೂರು: ಹೆಚ್ಚಿದ ಬೀದಿನಾಯಿ ಹಾವಳಿ

​ಪ್ರಜಾವಾಣಿ ವಾರ್ತೆ
Published 1 ಅಕ್ಟೋಬರ್ 2024, 13:09 IST
Last Updated 1 ಅಕ್ಟೋಬರ್ 2024, 13:09 IST
ಚೇಳೂರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ
ಚೇಳೂರು ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ   

ಚೇಳೂರು: ಪಟ್ಟಣದ ನಾನಾ ಕಡೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನಸಾಮಾನ್ಯರು ಒಬ್ಬಂಟಿಯಾಗಿ ಓಡಾಡುವುದು ಕಷ್ಟವಾಗಿದೆ.

ಗಲ್ಲಿ ಗಲ್ಲಿಗಳಲ್ಲಿ ತಿರುಗಾಡುತ್ತಿರುವ ಬೀದಿ ನಾಯಿಗಳ ಹಿಂಡು ವಾಹನ ಸವಾರರ ಮೇಲೆ ದಾಳಿ ಮಾಡುತ್ತವೆ. ಕೆಲ ನಾಯಿಗಳು ಬೈಕ್‌, ಕಾರುಗಳ ಹಿಂದೆ ಓಡಿ ಬರುತ್ತಿರುವ ಪರಿಣಾಮ ವಾಹನ ಸವಾರರು ಆತಂಕ ಪಡಬೇಕಾಗಿದೆ.

ರಸ್ತೆಯಲ್ಲಿ ಚಿಕ್ಕ ಮಕ್ಕಳು, ವಯೋವೃದ್ಧರು ಸಂಚಾರ ಮಾಡಲು ಹಿಂದೇಟು ಹಾಕುವಂತಾಗಿದೆ. ರಾತ್ರಿ ವೇಳೆ ಬಡಾವಣೆಗಳ ಬೀದಿ ನಿವಾಸಿಗಳ ನಿದ್ದೆಗೆಡಿಸುತ್ತಿರುವ ಬಿಡಾಡಿ ನಾಯಿಗಳ ಉಪಟಳ ಹೆಚ್ಚಾಗಿದೆ.

ADVERTISEMENT

ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸಂಬಂಧಿಸಿದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದ ಪರಿಣಾಮ ಜನರು ಅಧಿಕಾರಿಗಳ ವಿರುದ್ಧ ಹಿಡಿಶಾಪ ಹಾಕುತ್ತಿದಾರೆ.

ಪಟ್ಟಣದ ಬಾಗೇಪಲ್ಲಿ ಮುಖ್ಯ ರಸ್ತೆ ಮತ್ತು ಚಿಂತಾಮಣಿ ಮುಖ್ಯ ರಸ್ತೆ ಬದಿಯಲ್ಲಿ ಮಾಂಸದ ಅಂಗಡಿಗಳು ಹೆಚ್ಚಾಗಿವೆ. ಈ ಭಾಗದಲ್ಲಿ ನಾಯಿಗಳ ಓಡಾಟವೂ ಹೆಚ್ಚಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.