ADVERTISEMENT

ಯಾರೇ ಅಭ್ಯರ್ಥಿಯಾದರೂ ಗೆಲುವಿಗೆ ಶ್ರಮಿಸುವೆವು: ರಕ್ಷಾ ರಾಮಯ್ಯ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2024, 16:01 IST
Last Updated 19 ಫೆಬ್ರುವರಿ 2024, 16:01 IST
<div class="paragraphs"><p>ಗುಡಿಬಂಡೆ ಪಟ್ಟಣದಲ್ಲಿ ಸೋಮವಾರ ನಡೆದ ಕ್ರಿಕೆಟ್ ಟೂರ್ನಿ ಉದ್ಘಾಟಿಸಿದ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಮಾತನಾಡಿದರು</p></div>

ಗುಡಿಬಂಡೆ ಪಟ್ಟಣದಲ್ಲಿ ಸೋಮವಾರ ನಡೆದ ಕ್ರಿಕೆಟ್ ಟೂರ್ನಿ ಉದ್ಘಾಟಿಸಿದ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಮಾತನಾಡಿದರು

   

ಗುಡಿಬಂಡೆ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಯಾರೇ ಅಭ್ಯರ್ಥಿಯಾಗಿ ಕಣಕ್ಕಿಳಿದರೂ, ಅವರ ಗೆಲುವಿಗೆ ನಾವೆಲ್ಲರೂ ಶ್ರಮಿಸುತ್ತೇವೆ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ ಹೇಳಿದ್ದಾರೆ.

ಪಟ್ಟಣದಲ್ಲಿನ ಯುವಕ ತಂಡದ ವತಿಯಿಂದ ಸೋಮವಾರ ನಡೆದ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ADVERTISEMENT

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಬಿಜೆಪಿ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ರೈತ ವಿರೋಧಿ ನೀತಿಗಳ ವಿರುದ್ಧ ನಾವೆಲ್ಲಾರೂ ಹೋರಾಡಬೇಕಿದೆ. ಕೇಂದ್ರ ಬಿಜೆಪಿ ಸರ್ಕಾರ ರೈತರನ್ನು ತುಚ್ಛವಾಗಿ ನಡೆಸಿಕೊಳ್ಳುತ್ತಿದೆ. ಎಲ್ಲದಕ್ಕೂ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉತ್ತರ ಸಿಗಲಿದೆ ಎಂದರು.

‘ಯುವಕರ ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ ಕ್ರೀಡಾಕೂಟಗಳು ಸಹಕಾರಿಯಾಗಿವೆ. ಮುಂದಿನ ವರ್ಷದೊಳಗೆ ಪಟ್ಟಣದಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಯುವಜನರು ಹೆಚ್ಚಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು’ ಎಂದರು. 

ರಾಜ್ಯ ಸರ್ಕಾರ ಮಂಡಿಸಿದ ಬಜೆಟ್‌ನಲ್ಲಿ ಯುವಕರಿಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಆದರೆ ಕೇಂದ್ರ ಸರ್ಕಾರ ಮಾತ್ರ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿ ಯುವಕರಿಗೆ ಮೋಸ ಮಾಡಿದೆ. ಮುಂದಿನ ನಾಲ್ಕು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಮತಷ್ಟು ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯದ ಪ್ರತಿಯೊಬ್ಬರನ್ನೂ ಸಬಲರನ್ನಾಗಿಸುವ ಕೆಲಸ ಮಾಡಲಿದೆ ಎಂದರು.

ಇನ್ನು ಕ್ರಿಕೆಟ್ ಟೂರ್ನಿಯಲ್ಲಿ ಮೊದಲ ಜಯ ಗಳಿಸಿದ ತಂಡಕ್ಕೆ ₹30 ಸಾವಿರ, ದ್ವಿತೀಯ ಸ್ಥಾನಕ್ಕೆ ₹20 ಸಾವಿರ ಬಹುಮಾನ ಹಾಗೂ ಟ್ರೋಫಿ ನೀಡಲಾಯಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.