ADVERTISEMENT

ಚಿಕ್ಕಬಳ್ಳಾಪುರ: ಡಿ.ಸಿ ಕಚೇರಿ ಮುಂಭಾಗ ಪ್ರತಿಭಟನೆ

ರೈತರು ಹಾಗೂ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 26 ನವೆಂಬರ್ 2024, 14:17 IST
Last Updated 26 ನವೆಂಬರ್ 2024, 14:17 IST
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಂಯುಕ್ತ ಹೋರಾಟ ಕಾರ್ಮಿಕ ಸಂಘಟನೆ ಜಂಟಿ ಸಮಿತಿ ಸದಸ್ಯರು ಪ್ರತಿಭಟಿಸಿದರು
ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸಂಯುಕ್ತ ಹೋರಾಟ ಕಾರ್ಮಿಕ ಸಂಘಟನೆ ಜಂಟಿ ಸಮಿತಿ ಸದಸ್ಯರು ಪ್ರತಿಭಟಿಸಿದರು   

ಚಿಕ್ಕಬಳ್ಳಾಪುರ: ರೈತರು ಮತ್ತು ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಸಂಯುಕ್ತ ಹೋರಾಟ–ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಜಿಲ್ಲಾ ಘಟಕದ ಸದಸ್ಯರು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಮಂಗಳವಾರ ಪ್ರತಿಭಟಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.

ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆಯನ್ನು ಕಾನೂನುಬದ್ಧಗೊಳಿಸಬೇಕು. ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸಬೇಕು. ಕಾರ್ಮಿಕರ ಗುತ್ತಿಗೆ ಅಥವಾ ಹೊರ ಗುತ್ತಿಗೆ ಪದ್ಧತಿ ಇರಬಾರದು. ಸಾಲಬಾಧೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರು ಮತ್ತು ಕೃಷಿ ಕಾರ್ಮಿಕರಿಗೆ ಸಮಗ್ರ ಸಾಲ ಮನ್ನಾ ಮಾಡಬೇಕು. ರೈತರು ಮತ್ತು ಕಾರ್ಮಿಕರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ ಖಚಿತಪಡಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

60 ವರ್ಷ ದಾಟಿದ ಎಲ್ಲರಿಗೂ ಮಾಸಿಕ ₹10 ಸಾವಿರ ಪಿಂಚಣಿ ನೀಡಬೇಕು. ಸಮಾಜದಲ್ಲಿ ಕೋಮು ವಿಭಜನೆ ನಿಲ್ಲಿಸಲು ಕಠಿಣ ಕ್ರಮ ಕೈಗೊಳ್ಳಬೇಕು. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯ ಕೊನೆಗೊಳಿಸಲು ಕ್ರಮವಹಿಸಬೇಕು ಎಂದು ಒತ್ತಾಯಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಎನ್.ಭಾಸ್ಕರ್ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

ಕೃಷಿ ಕೂಲಿ ಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಅನಿಲ್ ಕುಮಾರ್, ಎಂ.ಪಿ.ಮುನಿವೆಂಕಟಪ್ಪ, ಜಿಲ್ಲಾ ಸಂಚಾಲಕ ಬಿ.ಎನ್.ಮುನಿಕೃಷ್ಣಪ್ಪ, ಸಿಐಟಿಯು ಜಿಲ್ಲಾ ಅಧ್ಯಕ್ಷ ಜಿ.ಸಿದ್ದಗಂಗಪ್ಪ, ಡಿ.ಸಿ.ಶ್ರೀನಿವಾಸ್, ಅಶ್ವತ್ಥನಾರಾಯಣ್, ಚನ್ನರಾಯಪ್ಪ, ಜಯರಾಮಶೆಟ್ಟಿ, ಸೋಮಶೇಖರ್, ಭಾಗ್ಯಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.