ADVERTISEMENT

ಅನ್ಯಜಾತಿ ಯುವಕನೊಂದಿಗೆ ಮಗಳ ನಾಪತ್ತೆ: ಒಂದೇ ಕುಟುಂಬದ ಮೂವರ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2022, 5:28 IST
Last Updated 4 ಅಕ್ಟೋಬರ್ 2022, 5:28 IST
   

ಶಿಡ್ಲಘಟ್ಟ:ಅನ್ಯಜಾತಿ ಯುವಕನೊಂದಿಗೆ ಮಗಳು ನಾಪತ್ತೆ ಆಗಿದ್ದಕ್ಕೆ ಮನನೊಂದು ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ.

ಶ್ರೀರಾಮಪ್ಪ (69), ಅವರ ಪತ್ನಿ ಸರೋಜ (55),ಪುತ್ರ ಮನೋಜ್(25) ವಿಷದ ಮಾತ್ರೆಗಳನ್ನು ಸೇವಿಸಿ ಮೃತಪಟ್ಟಿದ್ದಾರೆ.

ಅನ್ಯಜಾತಿಯವನಾದ ಹಂಡಿಗನಾಳ ಗ್ರಾಮದ ಚಾಲಕ ನಾರಾಯಣಸ್ವಾಮಿ ಜೊತೆಯಲ್ಲಿ ನನ್ನ ಮಗಳು ಅರ್ಚನಾ ಹೊರಟು ಹೋಗಿದ್ದಾಳೆ. ಇದರಿಂದ ಮನನೊಂದಿದ್ದೇವೆ. ತಮ್ಮ ಸಾವಿಗೆ ಮಗಳು ಕಾರಣ ಎಂದು ಡೆತ್ ನೋಟ್ ಸಹ ಬರೆದಿದ್ದಾರೆ.

ADVERTISEMENT

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಸಿಪಿಐ ನಂದನ್‌ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆಯ ಪಿ ಎಸ್ ಐ ಸತೀಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ಪರಿಶೀಲಿಸಿದರು. ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.