ADVERTISEMENT

ಚಿಕ್ಕಬಳ್ಳಾಪುರ | ಚುನಾವಣೆ ಹಿನ್ನೆಲೆ ರೇಷ್ಮೆಗೂಡು ವಹಿವಾಟು, ನಂದಿ ಬೆಟ್ಟ ಪ್ರವೇಶ ಬಂದ್

​ಪ್ರಜಾವಾಣಿ ವಾರ್ತೆ
Published 10 ಮೇ 2023, 4:45 IST
Last Updated 10 ಮೇ 2023, 4:45 IST
ಶಿಡ್ಲಘಟ್ಟ ರೇಷ್ಮೆಗೂಡು ಮಾರುಕಟ್ಟೆಯಲ್ಲಿನ ವಹಿವಾಟು
ಶಿಡ್ಲಘಟ್ಟ ರೇಷ್ಮೆಗೂಡು ಮಾರುಕಟ್ಟೆಯಲ್ಲಿನ ವಹಿವಾಟು   

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರದಂದು( ಮೇ10) ಜಿಲ್ಲೆಯ ಪ್ರವಾಸಿತಾಣಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಲಾಗಿದೆ. ಚಿಂತಾಮಣಿ ಮತ್ತು ಶಿಡ್ಲಘಟ್ಟ ರೇಷ್ಮೆಗೂಡು ಮಾರುಕಟ್ಟೆಯಲ್ಲಿ ವಹಿವಾಟು ಸಹ ನಡೆಯುವುದಿಲ್ಲ.

'ಮತದಾರರೆಲ್ಲರೂ ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎನ್ನುವ ಚುನಾವಣಾ ಆಯೋಗದ ನಿರ್ದೇಶನ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ 10ರಂದು ಬೆಳಿಗ್ಗೆ 5ರಿಂದ ರಾತ್ರಿ 8ರವರೆಗೆ ಪ್ರವೇಶ ನಿಷೇಧಿಸಲಾಗಿದೆ' ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದ್ದಾರೆ.

ಶಿಡ್ಲಘಟ್ಟ ಮತ್ತು ಚಿಂತಾಮಣಿಯ ರೇಷ್ಮೆಗೂಡು ಮಾರುಕಟ್ಟೆಯಲ್ಲಿಯೂ ವ್ಯಾಪಾರ ವಹಿವಾಟು ನಡೆಯುವುದಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.