ಚಿಕ್ಕಬಳ್ಳಾಪುರ: ಬಿಜೆಪಿ ಕೋಮುವಾದಿ, ಮತೀಯವಾದಿ ಪಕ್ಷ ಎಂದು ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ಪಕ್ಷದ ವಿರುದ್ಧವೇ ಟೀಕಾಪ್ರಹಾರ ನಡೆಸಿದರು.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಇರುವವರೆಗೂ ಬಿಜೆಪಿ ಜೊತೆ ಜೆಡಿಎಸ್ ಹೋಗುವುದಿಲ್ಲ ಎಂದುಕೊಂಡಿದ್ದೆ. ಜಾತ್ಯತೀತ ಎನಿಸಿರುವ ಜೆಡಿಎಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಹೋಗುವುದು ಅಚ್ಚರಿಯಾಗಿದೆ ಎಂದರು.
ಜೆಡಿಎಸ್ ಮತ್ತು ಬಿಜೆಪಿ ಒಂದಾಗುತ್ತದೆ ಎನ್ನುವುದು ಜನರಿಗೆ ಗೋಪ್ಯದ ವಿಚಾರವಾಗಿತ್ತು. ಆದರೆ ಈಗ ಜನರಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಒಳ್ಳೆಯದಾಗುವುದಿಲ್ಲ. ಪಕ್ಷದ ಶಕ್ತಿ ಕ್ಷೀಣಿಸುತ್ತದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಆಡಳಿತ ನಡೆಸಿದೆ. ದೊಡ್ಡ ಮಟ್ಟದ ನಾಯಕರು ಇದ್ದಾರೆ. ಆದರೂ ವಿಧಾನಸಭೆ ಪ್ರತಿಪಕ್ಷದ ನಾಯಕ ಮತ್ತು ರಾಜ್ಯ ಘಟಕದ ಅಧ್ಯಕ್ಷರ ನೇಮಕವಾಗಿಲ್ಲ. ಜೆಡಿಎಸ್ ಮತ್ತು ಬಿಜೆಪಿ ಒಂದಾಗುವ ಕಾರಣದಿಂದಾಗಿಯೇ ಮೇಲಿನವರು (ಹೈಕಮಾಂಡ್) ಆಯ್ಕೆಗೆ ತಡ ಮಾಡಿದ್ದಾರೆ. ಈ ಒಂದಾಗುವ ತೀರ್ಮಾನದ ಮೇಲೆ ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ ಎಂದು ನನಗೆ ಅನ್ನಿಸುತ್ತಿದೆ ಎಂದು ಹೇಳಿದರು.
ಬಿಜೆಪಿಯವರು ಮಾಡುವುದೆಲ್ಲ ಸರಿ ಎಂದು ಹೇಳಲು ಆಗುವುದಿಲ್ಲ. ನಾನೂ ಪಕ್ಷದಲ್ಲಿ ಹಿರಿಯನಿದ್ದೇನೆ. ಸುಮ್ಮನೆ ಇರಬೇಕಾಗುತ್ತದೆ ಸುಮ್ಮನೆ ಇದ್ದೇನೆ ಎಂದರು.
ಇವನ್ನೂ ಓದಿ...
ಲೋಕಸಭೆ ಚುನಾವಣೆ | ಜೆಡಿಎಸ್ ಜತೆ ಮೈತ್ರಿ ಖಚಿತ, ಈಗಾಗಲೇ 4 ಕ್ಷೇತ್ರ ಅಂತಿಮ: ಯಡಿಯೂರಪ್ಪ
ಸಂಘರ್ಷವೇ ಆಗಲಿ, ಮಹಿಷ ದಸರೆಗೆ ಅವಕಾಶ ಕೊಡುವುದಿಲ್ಲ: ಸಂಸದ ಪ್ರತಾಪ ಸಿಂಹ
Lok Sabha Election 2024 | ಜೆಡಿಎಸ್ – ಬಿಜೆಪಿ ಮೈತ್ರಿಗೆ ಸಹಮತ: ಪ್ರತಾಪ ಸಿಂಹ
ಅಸ್ತಿತ್ವ ಉಳಿಸಿಕೊಳ್ಳಲು ಬಿಜೆಪಿ ಜೊತೆ ಮೈತ್ರಿ ಅನಿವಾರ್ಯ: ಜಿ.ಟಿ. ದೇವೇಗೌಡ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.