ಚಿಕ್ಕಬಳ್ಳಾಪುರ: ‘ಯಾರು ಚುನಾವಣೆಯಲ್ಲಿ ಸೋತಿದ್ದಾರೊ ಅವರ ಹಿಂಬಾಲಕರು ನರಸತ್ತವರು. ಯಾರು ಗೆದ್ದಿದ್ದಾರೊ ಅವರ ಹಿಂಬಾಲಕರು ಗಂಡಸರು’–ಇದು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡುವಾಗ ಶಾಸಕ ಪ್ರದೀಪ್ ಈಶ್ವರ್, ಮಾಜಿ ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಹರಿಹಾಯ್ದ ಪರಿ.
ಸೋಮವಾರ ನಡೆದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಹಾಲು ಉತ್ಪಾದಕರ ಸಹಕಾರ ಸಂಘಗಳ ನೂತನ ನಿರ್ದೇಶಕರಿಗೆ ಅಭಿನಂದನಾ ಸಮಾರಂಭದಲ್ಲಿ, ಡಾ.ಕೆ.ಸುಧಾಕರ್, ‘ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದವರಲ್ಲದ ಗೌರಿಬಿದನೂರಿನ ಮುಖಂಡರನ್ನು ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಚಿಕ್ಕಬಳ್ಳಾಪುರ ನಾಯಕರಿಗೆ ಮೀಟರ್ ಇಲ್ಲವೆ’ ಎಂದಿದ್ದರು.
‘ನಮ್ಮ ಚಿಕ್ಕಬಳ್ಳಾಪುರ ಸ್ಥಳೀಯ ಕಾಂಗ್ರೆಸ್ ನಾಯಕರು ಸಮರ್ಥರಿದ್ದಾರೆ. ಅವರ (ಡಾ.ಕೆ.ಸುಧಾಕರ್) ಜೊತೆ ಇರುವವರು ನರಸತ್ತವರು. ಎಲ್ಲ ಜಿಲ್ಲಾ ಅಧ್ಯಕ್ಷರಿಗೆ ನಿಗಮ ಮಂಡಳಿಗಳಲ್ಲಿ ಸ್ಥಾನ ಕೊಡಬೇಕಾಗಿತ್ತು. ಆದರೆ ತಡವಾಗುತ್ತದೆ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ ಕಷ್ಟದಲ್ಲಿ ಪಕ್ಷವನ್ನು ನಡೆಸಿದ್ದಾರೆ. ಅವರಿಗೆ ಅವಕಾಶ ನೀಡಲಾಗಿದೆ ಎಂದರು.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಡಾ.ಕೆ.ಸುಧಾಕರ್ ಕಾಂಗ್ರೆಸ್ ನಾಯಕರ ಕಾಲಿಗೆ ಬಿದ್ದಿದ್ದಾರೆ. ಕಾಂಗ್ರೆಸ್‌ಗೆ ಮೋಸ ಮಾಡಿ ಬಿಜೆಪಿಗೆ ಹೋದವರು ಅವರು. ನೆಟ್ಟಗೆ ಬಿಜೆಪಿಯಲ್ಲಿಯೇ ಇರಲಿ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.