ಗೌರಿಬಿದನೂರು: ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಗೆ ಬುಧವಾರ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ ಭೇಟಿ ನೀಡಿದ್ದರು.
ತಾಲ್ಲೂಕಿನ ದ್ವಾರಗಾನಹಳ್ಳಿಯಲ್ಲಿ ಪೋಷಕರನ್ನು ಕಳೆದುಕೊಂಡಿರುವ ಮಗುವಿನ ಶೈಕ್ಷಣಿಕ ಜವಾಬ್ದಾರಿ ಹೊತ್ತು ವಸತಿ ಶಾಲೆಗೆ ದಾಖಲಿಸಲು ಬಂದಿರುವುದಾಗಿ ತಿಳಿಸಿದರು.
ಈ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ 1 ರಿಂದ 5ನೇ ತರಗತಿವರೆಗೆ ಉಚಿತ ಊಟ, ವಸತಿ ನೀಡಲಾಗುತ್ತಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 5ನೇ ತರಗತಿಯಿಂದ 12ನೇ ತರಗತಿಯವರೆಗೆ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೊರಾರ್ಜಿ ದೇಸಾಯಿ ಮತ್ತು ಕಿತ್ತೂರು ರಾಣಿ ಚನ್ನಮ್ಮ ಶಾಲೆಗಳಲ್ಲಿ ಉಚಿತ ಪ್ರವೇಶ ಮತ್ತು ಶಿಕ್ಷಣ ನೀಡಲಾಗುವುದು ಎಂದು ಶಾಸಕ ಪ್ರದೀಪ್ ಈಶ್ವರ್‌ಗೆ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ಅಂಜಿನಪ್ಪ ಮಾಹಿತಿ ನೀಡಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚೆನ್ನಪ್ಪ ಗೌಡ ನಾಯ್ಕರ್ ಹಾಗೂ ಸಿಬ್ಬಂದಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.