ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ನಗರದ ಶಿಡ್ಲಘಟ್ಟ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಪೊಲೀಸರು ಮತ್ತು ಪಕ್ಷದ ಮುಖಂಡರ ನಡುವೆ ವಾಗ್ವಾದ ನಡೆಯಿತು.
ಪೊಲೀಸರಿಗೆ ಬಿಜೆಪಿ ಕಾರ್ಯಕರ್ತರು ಧಿಕ್ಕಾರದ ಘೋಷಣೆ ಕೂಗಿದರು.
ಶಿಡ್ಲಘಟ್ಟ ವೃತ್ತದಲ್ಲಿ ನಡುರಸ್ತೆಯಲ್ಲಿ ಧರಣಿ ನಡೆಸಿದ ನಂತರ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿದರು. ಆಗ ಸಂಚಾರಕ್ಕೆ ತೊಂದರೆ ಆಯಿತು. ಈ ವೇಳೆ ಪೊಲೀಸರ ಮತ್ತು ಪ್ರತಿಭಟನಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಭ್ರಷ್ಟ ಮುಖ್ಯಮಂತ್ರಿ ರಾಜೀನಾಮೆ ನೀಡಲೇಬೇಕು. ದಲಿತ ವಿರೋಧಿ ರಾಜ್ಯ ಸರ್ಕಾರಕ್ಕೆ ಧಿಕ್ಕಾರ , ಎಲ್ಲಿಯವರೆಗೆ ಹೋರಾಟ ಸಿದ್ದರಾಮಯ್ಯ ತೊಲಗುವವರೆಗೆ ಹೋರಾಟ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ಬಿಜೆಪಿ ಜಿಲ್ಲಾ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡರಾದ ಸೀಕಲ್ ಆನಂದಗೌಡ, ಮಾಜಿ ಶಾಸಕ ಎಂ.ರಾಜಣ್ಣ, ಮರಳುಕುಂಟೆ ಕೃಷ್ಣಮೂರ್ತಿ, ಸುರೇಂದ್ರ ಗೌಡ, ಎಸ್.ಆರ್.ಎಸ್.ದೇವರಾಜ್, ಬಾಲಕುಂಟಹಳ್ಳಿ ಗಂಗಾಧರ್ ಹಾಗೂ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.