ಚಿಕ್ಕಬಳ್ಳಾಪುರ: ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ನಂದಿಗಿರಿಧಾಮಕ್ಕೆ ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ಪ್ರವಾಸಿಗರು, ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಡಿ.31ರ ಸಂಜೆ 6ರಿಂದ 2024ರ ಜ.1ರ ಬೆಳಿಗ್ಗೆ 6ರವರೆಗೆ ಪ್ರವೇಶ ನಿಷೇಧಿಸಲಾಗಿದೆ. ಗಿರಿಧಾಮದಲ್ಲಿನ ಅತಿಥಿಗೃಹಗಳಲ್ಲಿ ಕೊಠಡಿಗಳನ್ನು ಕಾಯ್ದಿರಿಸುವುದನ್ನು ರದ್ದುಗೊಳಿಸ
ಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.