ADVERTISEMENT

ಗುಡಿಬಂಡೆ: ಮಾಸ್ಕ್‌ ಧರಿಸದ ವ್ಯಕ್ತಿಗಳಿಗೆ ಅಧಿಕಾರಿಗಳಿಂದ ದಂಡ

ಎಂ.ಮುನಿನಾರಾಯಣ
Published 28 ಸೆಪ್ಟೆಂಬರ್ 2020, 9:13 IST
Last Updated 28 ಸೆಪ್ಟೆಂಬರ್ 2020, 9:13 IST
ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುವ ವ್ಯಕ್ತಿಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ದಂಡ ಹಾಕುತ್ತಿರುವುದು.
ಪಟ್ಟಣದಲ್ಲಿ ಮಾಸ್ಕ್ ಧರಿಸದೆ ಓಡಾಡುವ ವ್ಯಕ್ತಿಗಳಿಗೆ ತಾಲ್ಲೂಕು ಮಟ್ಟದ ಅಧಿಕಾರಿಗಳ ದಂಡ ಹಾಕುತ್ತಿರುವುದು.   

ಗುಡಿಬಂಡೆ: ಕೋವಿಡ್ 19 ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು,ತಾಲೂಕಿನಲ್ಲಿ ಪ್ರಕರಣಗಳ ಸಂಖ್ಯೆ 300 ರ ಗಡಿ ಸಮೀಪಿಸಿದೆ. ಇಷ್ಟಾದರೂ ಸಾರ್ವಜನಿಕರಿಗೆ ಅರಿವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಧರಸಿದೇ ಓಡಾಡುವವರಿಗೆ ದಂಡವನ್ನು ವಿಧಿಸಲು ಜಿಲ್ಲಾಧಿಕಾರಿಗಳ ಸೂಚನೆ
ಯಂತೆ ಕ್ರಮ ಕೈಗೊಳ್ಳಲಾಗುತ್ತಿದೆಎಂದು ತಹಶೀಲ್ದಾರ್ ಸಿಗ್ಬತುಲ್ಲ ತಿಳಿಸಿದ್ದಾರೆ.

ಪಟ್ಟಣದಲ್ಲಿ ಮುಖಗವಸು ಧರಿಸದೆ ಸಂಚರಿಸುವವರಿಗೆ ತಹಶೀಲ್ದಾರ್ ಸಿಗ್ಬತುಲ್ಲ, ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ರಾಜಶೇಖರ್ ಜಂಟಿಯಾಗಿ ದಂಡ ವಿಧಿಸುತ್ತಿದ್ದಾರೆ.

ಕರ್ನಾಟಕ ಸರಕಾರದ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಸೆ.24 ರಂದು ನಡೆದ ವಿಡಿಯೋ
ಸಂವಾಧದಲ್ಲಿ ಪ್ರತಿ ದಿನ ದಂಡವನ್ನು ವಸೂಲಿ ಮಾಡಲು ಗುರಿಯನ್ನು ನಿಗಪಡಿಸಲು ಸೂಚಿಸಿರುತ್ತಾರೆ. ಅದರಂತೆ ಜಿಲ್ಲಾಧಿಕಾರಿಗಳ ಆದೇಶದಂತೆ ಪಟ್ಟಣ ಪಂಚಾಯಿತಿಯಲ್ಲಿ ಮಾಸ್ಕ್ ಧರಿಸದೇ ಇರುವವರಿಗೆ₹ 200 ದಂಡ ಹಾಕಲಾಗುತ್ತಿದ್ದೆ ಎಂದು ಅವರು ಮಾಹಿತಿ ನೀಡಿದರು.

ADVERTISEMENT

ಈ ವೇಳೆ ಕಸಬಾ ಗ್ರಾಮ ಲೆಕ್ಕಾಧಿಕಾರಿ ವಿ.ಲಕ್ಷ್ಮಿನಾರಾಯಣ, ಪಟ್ಟಣ ಪಂಚಾಯಿತಿ ಆರೋಗ್ಯಾಧಿಕಾರಿ ಶಿವಣ್ಣ, ಪೊಲೀಸ್ ಸಿಬ್ಬಂದಿ, ಪಟ್ಟಣ ಪಂಚಾಯಿತಿ ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.