ADVERTISEMENT

ಪಕ್ಷ ಸಂಘಟನೆಗೆ ಒತ್ತು ನೀಡಿ

ಪೇರೇಸಂದ್ರದಲ್ಲಿ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 18 ಜುಲೈ 2019, 19:48 IST
Last Updated 18 ಜುಲೈ 2019, 19:48 IST
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್ ಮಾತನಾಡಿದರು.   

ಚಿಕ್ಕಬಳ್ಳಾಪುರ: ತಾಲ್ಲೂಕಿನ ಪೇರೇಸಂದ್ರದಲ್ಲಿ ಗುರುವಾರ ಬಿಜೆಪಿ ಸಂಘಟನಾ ಪರ್ವ ಸದಸ್ಯತ್ವ ಅಭಿಯಾನ ಕಾರ್ಯಾಗಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಅಧ್ಯಕ್ಷ ಅಗಲಗುರ್ಕಿ ಚಂದ್ರಶೇಖರ್, ‘ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಮತವನ್ನು ಬಿಜೆಪಿ ಪಕ್ಷ ಪಡೆದಿದೆ. ಈ ಸಮಯದಲ್ಲಿ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಸಂಚಾಲಕರು, ಸಹ ಸಂಚಾಲಕರು ಪ್ರತಿ ಬೂತಿನಲ್ಲಿ ಕನಿಷ್ಠ 25 ಹೊಸ ಸದಸ್ಯರ ನೋಂದಣಿ ಮಾಡಿಸುವ ಕೆಲಸ ಮಾಡಬೇಕು’ ಎಂದು ಹೇಳಿದರು.

‘ಗ್ರಾಮಾಂತರ ಪ್ರದೇಶದಲ್ಲಿ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸುವ ಮೂಲಕ ಯೋಜನೆಯ ಲಾಭ ರೈತರಿಗೆ ತಲುಪುವಂತೆ ಮಾಡಬೇಕು. ಪಕ್ಷ ಸಂಘಟನೆ ಕಾರ್ಯವನ್ನು ತಪ್ಪದೆ ಒಂದು ವ್ರತದಂತೆ ಮಾಡಬೇಕು’ ಎಂದು ತಿಳಿಸಿದರು.

ADVERTISEMENT

ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಕೃಷ್ಣರೆಡ್ಡಿ ಕೃಷ್ಣಮೂರ್ತಿ, ರಾಜ್ಯ ರೈತ ಮೋರ್ಚಾ ಘಟಕದ ಉಪಾಧ್ಯಕ್ಷ ರಾಮಿರೆಡ್ಡಿ, ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ರಾಮಣ್ಣ, ಎಸ್ಸಿ ಮೋರ್ಚಾ ಕಾರ್ಯದರ್ಶಿ ವಿಜಯಕುಮಾರ್, ಬಾಗೇಪಲ್ಲಿ ಮಂಡಲ ಅಧ್ಯಕ್ಷ ಎಸ್ಟಿ ಬಾಬು, ಗುಡಿಬಂಡೆ ಮಂಡಲ ಅಧ್ಯಕ್ಷ ಗೋಪಾಲ್ ಹಾಗೂ ಜಿಲ್ಲಾ ಘಟಕದ ಉಪಾಧ್ಯಕ್ಷ ಸಂದೀಪ ರೆಡ್ಡಿ, ಯುವ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಬಿ.ಕಿರಣ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.