ADVERTISEMENT

ಮುರುಗಮಲ್ಲ ದರ್ಗಾ ಅಭಿವೃದ್ಧಿಗೆ ಯೋಜನೆ: ಸಚಿವ ಡಾ.ಎಂ.ಸಿ.ಸುಧಾಕರ್

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2023, 14:02 IST
Last Updated 19 ಸೆಪ್ಟೆಂಬರ್ 2023, 14:02 IST
ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಂಘದ ನೂತನ ಗ್ರಾಮೀಣ ಉಗ್ರಾಣ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉತ್ಸುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು.
ಚಿಂತಾಮಣಿ ತಾಲ್ಲೂಕಿನ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಂಘದ ನೂತನ ಗ್ರಾಮೀಣ ಉಗ್ರಾಣ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉತ್ಸುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಮಾತನಾಡಿದರು.   

ಚಿಂತಾಮಣಿ: ಮುರುಗಮಲ್ಲ ದರ್ಗಾ ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ವ್ಯವಸ್ಥಿತವಾಗಿ ಅಭಿವೃದ್ಧಿಪಡಿಸಲಾಗುವುದು. ಸುಸಜ್ಜಿತ ಕಟ್ಟಡ ನಿರ್ಮಾಣಕ್ಕಾಗಿ ಉತ್ತಮ ವಾಸ್ತುಶಿಲ್ಪಿಗಳನ್ನು ಸಂಪರ್ಕಿಸಲಾಗುವುದು ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಮುರುಗಮಲ್ಲ ಹೋಬಳಿಯ ನಂದಿಗಾನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಗ್ರಾಮೀಣ ಉಗ್ರಾಣ ಕಟ್ಟಡದ ಉದ್ಘಾಟಿಸಿ ಮಾತನಾಡಿದರು.

ತಾಲ್ಲೂಕಿನಲ್ಲಿ ಏಕಲವ್ಯ ವಸತಿ ಶಾಲೆ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲಾಗಿದೆ. ಶೀಘ್ರವೇ ನಿರ್ಮಾಣದ ಕಾಮಗಾರಿ ಆರಂಭವಾಗಲಿದೆ. ಏಕಲವ್ಯ ಶಾಲೆಯಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಮಾದರಿಯಲ್ಲಿ ಪಿಯುಸಿವರೆಗೂ ಆಂಗ್ಲ ಮಾಧ್ಯಮದಲ್ಲಿ ಓದಲು ಅನುಕೂಲ ಕಲ್ಪಿಸಲಾಗಿದೆ ಎಂದರು.

ADVERTISEMENT

ಗ್ರಾಮೀಣ ಉಗ್ರಾಣದಲ್ಲಿ ರೈತರು ತಾವು ಬೆಳೆದ ದವಸ ಧಾನ್ಯಗಳನ್ನು ಹಾಗೂ ಇತರೆ ಉತ್ಪನ್ನಗಳನ್ನು ದಾಸ್ತಾನು ಮಾಡಬಹುದು. ಸೂಕ್ತ ಬೆಲೆ ಬಂದಾಗ ಮಾರಾಟ ಮಾಡಲು ಅನುಕೂಲವಾಗುತ್ತದೆ. ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ರೈತ ಬಜಾರ್, ಕುಡಿಯುವ ನೀರಿನ ಟ್ಯಾಂಕ್ ಮತ್ತಿತರ ಮನವಿಗೆ ಸಂಬಂಧಿಸಿದಂತೆ ಪ್ರತಿಯೊಂದು ಹಳ್ಳಿಗೂ ಶುದ್ಧ ಕುಡಿಯುವ ನೀರಿನ ಫಿಲ್ಟರ್ ಒದಗಿಸಲು ವಿವಿಧ ಯೋಜನೆಗಳ ಹಾಗೂ ದಾನಿಗಳ ಮೂಲಕ ಒದಗಿಸುವ ಭರವಸೆ ನೀಡಿದರು.

ವ್ಯವಸಾಯ ಸೇವಾ ಸಹಕಾರ ಸಂಘದ ಲಕ್ಷ್ಮಿನಾರಾಯಣರೆಡ್ಡಿ ಮಾತನಾಡಿ, ಡಿಸಿಸಿ ಬ್ಯಾಂಕ್ ವತಿಯಿಂದ ರೈತರಿಗೆ ಹಾಗೂ ಸ್ವಸಹಾಯ ಸಂಘಗಳಿಗೆ ₹55 ಲಕ್ಷ ಸಾಲ ನೀಡಲಾಗಿದೆ ಎಂದು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ವೀಣಾ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ಎನ್.ನಾಗಿರೆಡ್ಡಿ, ಕೃಷಿಕ ಸಮಾಜದ ಉಪಾಧ್ಯಕ್ಷ ಪಟೇಲ್ ಅಶ್ವತ್ಥನಾರಾಯಣರೆಡ್ಡಿ, ಕೋಚಿಮುಲ್ ನಿರ್ದೇಶಕ ಅಶ್ವತ್ಥನಾರಾಯಣ ಬಾಬು, ಕೃಷ್ಣಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.