ADVERTISEMENT

ಚಿಕ್ಕಬಳ್ಳಾಪುರದಲ್ಲಿ ಉತ್ತಮ ಮಳೆ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2024, 16:19 IST
Last Updated 21 ಅಕ್ಟೋಬರ್ 2024, 16:19 IST
ಚಿಕ್ಕಬಳ್ಳಾಪುರದಲ್ಲಿ ಮಳೆಯ ನಡುವೆ ನಾಗರಿಕರು ರಸ್ತೆ ದಾಟುತ್ತಿರುವುದು
ಚಿಕ್ಕಬಳ್ಳಾಪುರದಲ್ಲಿ ಮಳೆಯ ನಡುವೆ ನಾಗರಿಕರು ರಸ್ತೆ ದಾಟುತ್ತಿರುವುದು   

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರ ಹಾಗೂ ತಾಲ್ಲೂಕಿನ ಗ್ರಾಮೀಣ ಭಾಗಗಳಲ್ಲಿ ಸೋಮವಾರ ರಾತ್ರಿ ಉತ್ತಮ ಮಳೆ ಸುರಿಯಿತು. ಸುಮಾರು 30 ನಿಮಿಷಕ್ಕೂ ಹೆಚ್ಚು ಕಾಲ ಮಳೆ ಬಿದ್ದಿತು.

ಚಿಕ್ಕಬಳ್ಳಾಪುರ ನಗರದ ರಸ್ತೆಗಳಲ್ಲಿ ದೊಡ್ಡ ಪ್ರಮಾಣದಲ್ಲಿ ನೀರು ನಿಲುಗಡೆ ಆಯಿತು. ಚರಂಡಿಗಳು ತುಂಬಿ ಹರಿದವು. ರಾತ್ರಿ ಹೀಗೆ ಏಕಾಏಕಿ ಮಳೆ ಸುರಿದ ಕಾರಣ ಅಂಗಡಿಗಳ ಮಾಲೀಕರು ಲಘುಬಗೆಯಲ್ಲಿ ಅಂಗಡಿಗಳ ಬಾಗಿಲು ಮುಚ್ಚಲು ಮುಂದಾಗುತ್ತಿದ್ದರು. 

ಗ್ರಾಮೀಣ ಭಾಗಗಳಲ್ಲಿಯೂ ಉತ್ತಮ ಮಳೆ ಸುರಿಯಿತು. ರಾಜ್ಯ ಹವಾಮಾನ ಇಲಾಖೆಯು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತದೆ ಎಂದು ಹೇಳುತ್ತಿದೆ. ಆದರೆ ಜಿಲ್ಲೆಯಲ್ಲಿ ಕೆರೆ ಕಟ್ಟೆಗಳಿಗೆ ನೀರಿ ತುಂಬುವಷ್ಟು ಮಳೆ ಸುರಿಯುತ್ತಿಲ್ಲ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.